ಮದ್ದೂರು: ಎಕ್ಸ್ಪ್ರೆಸ್‌ವೇನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಕೆಎಸ್‌ಆರ್‌ಟಿಸಿಯ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸರಣಿ ಅಪಘಾತ ಸಂಭವಿಸಿದೆ.
ಮದ್ದೂರು ಬೈಪಾಸ್ ರಸ್ತೆಯ ಕೆ.ಕೋಡಿಹಳ್ಳಿ ಬಳಿ ಈ ಘಟನೆ ಜರುಗಿದ್ದು, ಸರಣಿ ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್ ಮದ್ದೂರಿನ ಬೈಪಾಸ್ ರಸ್ತೆಯ ಕೆ.ಕೋಡಿಹಳ್ಳಿ ಸಮೀಪ ಮುಂದೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದೆ ಹೋಗುತ್ತಿದ್ದ ಮತ್ತೆರೆಡು ಕಾರುಗಳಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಮತ್ತು ವಾಹನ ಸವಾರರು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಸರಣಿ ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕಾರುಗಳು ಅಡ್ಡಾದಿಡ್ಡಿ ಬಿದ್ದಿದ್ದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…
ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…
ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…
ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…
ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…