ಮೈಸೂರು

ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ

ಮದ್ದೂರು: ಎಕ್ಸ್ಪ್ರೆಸ್‌ವೇನಲ್ಲಿ ಅಪಘಾತ ಸರಣಿ ಮುಂದುವರೆದಿದ್ದು, ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಭಾನುವಾರ ಸಂಜೆ ಕೆಎಸ್‌ಆರ್‌ಟಿಸಿಯ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ, ಸರಣಿ ಅಪಘಾತ ಸಂಭವಿಸಿದೆ.

ಮದ್ದೂರು ಬೈಪಾಸ್ ರಸ್ತೆಯ ಕೆ.ಕೋಡಿಹಳ್ಳಿ ಬಳಿ ಈ ಘಟನೆ ಜರುಗಿದ್ದು, ಸರಣಿ ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್ ಮದ್ದೂರಿನ ಬೈಪಾಸ್ ರಸ್ತೆಯ ಕೆ.ಕೋಡಿಹಳ್ಳಿ ಸಮೀಪ ಮುಂದೆ ಸಾಗುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದೆ ಹೋಗುತ್ತಿದ್ದ ಮತ್ತೆರೆಡು ಕಾರುಗಳಿಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಗಾಯಾಳುಗಳನ್ನು ಸ್ಥಳೀಯರು ಮತ್ತು ವಾಹನ ಸವಾರರು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಸರಣಿ ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕಾರುಗಳು ಅಡ್ಡಾದಿಡ್ಡಿ ಬಿದ್ದಿದ್ದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

andolanait

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

4 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

9 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

9 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

9 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

9 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

9 hours ago