ಮೈಸೂರು : ಕಳೆದ ವಾರದ ಹಿಂದೆ ನಗರದ ಹೃದಯ ಭಾಗದಲ್ಲಿಯೇ ನಡೆದ ಸರಣಿ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಅಲರ್ಟ್ ಆಗಿದ್ದಾರೆ.
ಮೈಸೂರು ಪೊಲೀಸ್ ರೌಡಿ ಪ್ರತಿಬಂಧಕದಳದಿಂದ ಕಾರ್ಯಾಚರಣೆ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಕಳೆದ ಎರಡು ದಿನಗಳಿಂದ ಮೈಸೂರು ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಶಂಕಿತ ರೌಡಿಗಳು ಮತ್ತು ಸಾರ್ವಜನಿಕರಿಗೆ ತೊಂದರೆ ನೀಡುವ 691 ಮಂದಿಯನ್ನು ಗುರುತಿಸಿ ಅವರ ಕೋಟ್ಪಾ ಕಾಯ್ದೆ ಮತ್ತು ಪೆಟ್ಟಿ ಕೇಸ್‍ನ್ನು ದಾಖಲಿಸಲಾಗಿದೆ.
ಇದನ್ನೂ ಓದಿ:-ಸಿಜೆಐ ಮೇಲೆ ದಾಳಿ : ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ʻಎಜಿʼ ಒಪ್ಪಿಗೆ
405 ಮಂದಿ ವಿಚಾರಣೆ
ನಗರದಲ್ಲಿನ ಉದ್ಯಾನವನಗಳು, ಬಾರ್, ವೈನ್ ಸ್ಟೋರ್ ಗಳು, ಟೀ ಅಂಗಡಿಗಳು, ಹೋಟೆಲ್‍ಗಳು, ಬೀದಿ ಬದಿ ಅಂಗಡಿಗಳು ಸೇರಿ ಎಲ್ಲಾ ಸ್ಥಳಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಇದರೊಂದಿಗೆ ಮೈಸೂರಿನ ದೊಡ್ಡಕೆರೆ ಮೈದಾನ, ದಸರಾ ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳ, ಜ್ವಾಲಾಮುಖಿ ಪಾರ್ಕಿಂಗ್ ಸ್ಥಳ, ಉದ್ಯಾನವನ, ಆರ್.ಎಂ.ಸಿ ಬಸ್ ನಿಲ್ದಾಣ ಮುಂತಾದ ಸ್ಥಳಗಳಲ್ಲಿ ನಿರಂತರ ಪೊಲೀಸ್ ಕಾರ್ಯಾಚರಣೆ ಮಾಡಲಾಗುತ್ತಿದೆ. ಕಾರ್ಯಾಚರಣೆ ವೇಳೆ 405 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಕೋಟ್ಪಾ ಕಾಯಿದೆಯಡಿ 204 ಪ್ರಕರಣ, ಕೆಪಿ ಕಾಯಿದೆಯಡಿ 487 ಪೆಟ್ಟಿ ಪ್ರಕರಣಗಳನ್ನು ದಾಖಲಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿಸಿಪಿಗಳಾದ ಬಿಂದು ಮಣಿ, ಸುಂದರ್ ರಾಜ್, ಎಲ್ಲಾ ಎಸಿಪಿಗಳು, ಠಾಣೆಗಳ ಇನ್ಸ್ ಪೆಕ್ಟರ್ ಗಳು ಮತ್ತು ಸಿಬ್ಬಂದಿ ಇದ್ದರು.
ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…
ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…
ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…
ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…
ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…