ಮೈಸೂರು

ಮೈಸೂರುರಲ್ಲಿ ಸಾಲು ಸಾಲು ಕೊಲೆ, ಹದಗೆಟ್ಟ ಕಾನೂನು ಸುವ್ಯವಸ್ಥೆ : ಎಂಎಲ್‌ಸಿ ವಿಶ್ವನಾಥ್‌ ಆರೋಪ

ಮೈಸೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಮೈಸೂರಿನಲ್ಲೂ ಸಹ ಹಾಳಾಗಿದೆ ಎಂದು ಎಂಎಲ್‌ಸಿ ವಿಶ್ವನಾಥ್‌ ಆರೋಪಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಎಸಿಪಿ ಆಗಿ ಬರಬೇಕಾದರೆ ೧ ಕೋಟಿ ನೀಡಬೇಕಿದೆ. ಇನ್ಸ್‌ಪೆಕ್ಟರ್ ಆಗಲು ೭೫ ಲಕ್ಷ, ಎಸ್‌ಐ ಆಗಲು ೫೦ ಲಕ್ಷ ಕೊಡಬೇಕು. ಇದರ ಪರಿಣಾಮ ರಾಜ್ಯದಲ್ಲಿ ಆಡಳಿತ ಯಂತ್ರ, ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಗಂಭೀರ ಆರೋಪ ಮಾಡಿದರು.

ಈಗ ಕರ್ತವ್ಯ ನಿರ್ವಹಿಸುತ್ತಿರುವವರು ಎಲ್ಲ ಅಧಿಕಾರಿಗಳು ಶಾಸಕರ ಕೃಪಾ ಪೋಷಿತರಾಗಿದ್ದು, ಶಾಸಕರು ಆಯಾಯ ಕ್ಷೇತ್ರಗಳ ಮಾಲೀಕರಾಗಿದ್ದಾರೆ. ರಾಜ್ಯದಲ್ಲಿ ಅತ್ಯಾಚಾರ, ಮಕ್ಕಳನ್ನು ಹೊತ್ತುಕೊಂಡು ಹೋಗುವ ಘಟನೆ ನಡೆಯುತ್ತಿದ್ದು, ಈ ಬಗ್ಗೆ ಮಾಹಿತಿ ಇದ್ದರೂ ಅವರ ಪುತ್ರ ಯತೀಂದ್ರ ಹಾಗು ಆತನ ಸ್ನೇಹಿತರು ವರ್ಗಾವಣೆ ದಂಧೆಯಲ್ಲಿ ತೊಡಗಿರುವುದರಿಂದ ಸಿಎಂ ಸಿದ್ದರಾಮಯ್ಯಗೆ ಇದನ್ನು ಕೇಳಲಾಗುತ್ತಿಲ್ಲ ಎಂದು ದೂರಿದರು.

ಇದನ್ನೂ ಓದಿ:-ಮೈಸೂರು | ಹಾಡುಹಗಲೇ ಮತ್ತೊಂದು ಭೀಕರ ಕೊಲೆ , ಪತ್ನಿಯ ಕತ್ತು ಸೀಳಿ ಕೊಂದ ಪತಿ

ಬೊಗಳೆ ಬಿಡುವ ಸಿದ್ದರಾಮಯ್ಯ
ಮಡಿವಾಳರು ಶಾಸಕರಾಗಬೇಕು ಎನ್ನುವ ಸಿಎಂ ಸಿದ್ದರಾಮಯ್ಯ, ಅವರಿಗೆ ಎಲ್ಲಿ ಅವಕಾಶ ಕೊಟ್ಟಿದ್ದೀರಾ?. ತರೀಕೆರೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತವರಿಗೆ ಅವಕಾಶ ಮಾಡಿಕೊಡಿ. ಇದರ ಬಗ್ಗೆ ಮಾತನಾಡದೆ ಸುಮ್ಮನೇ ಬೊಗಳೆ ಬಿಡುವ ಸಿದ್ದರಾಮಯ್ಯ, ಹೋದಲ್ಲೆಲ್ಲಾ ಸುಳ್ಳು ಹೇಳುವ ಮೂಲಕ ನಗೆಪಾಟಲಿಯಾಗಿದ್ದಾರೆ. ಈಗ ತೋರಿಕೆಗಾಗಿ ಮೂರು ಪಟ್ಟೆ ವಿಭೂತಿ, ಮಧ್ಯೆ ಕುಂಕುಮ ಹಾಕಿಕೊಂಡು ನಾನು ಹಿಂದೂ ಎನ್ನುತ್ತಿದ್ದಾರೆ. ಕಾಂತರಾಜು ಆಯೋಗದ ವರದಿಯನ್ನು ಮೊದಲು ಸ್ವೀಕಾರ ಮಾಡಿ. ಗಣತಿ ಹೆಸರಿನಲ್ಲಿ ಶಿಕ್ಷಕರನ್ನು ನಿಮ್ಮಿಷ್ಟದಂತೆ ನಡೆಸಿಕೊಳ್ಳುತ್ತಿದ್ದು, ಜನರ ಹಿಂದೆ ಬಾರದೆ ಎಲ್ಲ ದುಡ್ಡಿನ ಹಿಂದೆ ಹೋಗುತ್ತಿದ್ದಾರೆ. ಯಾವುದೇ ಮಾನದಂಡವಿಲ್ಲದೇ ಹಣ ಕೊಡುತ್ತಿದ್ದು, ಯಾರಾದರೂ ಹುಚ್ಚ, ಹೆಣ್ಣು ಮಕ್ಕಳಿಗೆ ಎರಡು ಸಾವಿರ ಕೊಡ್ತಾನಾ? ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

3 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

7 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

7 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

7 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

10 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

10 hours ago