ಮೈಸೂರು: ಪೆನ್‌ಡ್ರೈವ್‌ನಲ್ಲಿ ಇದೆ ಎನ್ನಲಾದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಇತ್ತ ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಪೆನ್ ಡ್ರೈವ್ ಪ್ರಕರಣದಲ್ಲಿ ಶಾಸಕ ಎಚ್.ಡಿ ರೇವಣ್ಣ ಈ ಎಲ್ಲಾ ಪ್ರಕರಣಗಳಿಗೆ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.
ಈ ಎಲ್ಲದರ ಹೊರತಾಗಿಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ರೇವಣ್ಣ ಹೆಸರು ಕೇಳಿ ಬುರುತ್ತಿದೆ. ಮೈಸೂರು ಜಿಲ್ಲೆಯ ಕೆ.ಆರ್ ನಗರದ ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಜೆಡಿಎಸ್ ಮುಖಂಡ ಎಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಕಾಣೆಯಾಗಿರುವ ಮಹಿಳೆ ಪುತ್ರ ಈ ದೂರು ದಾಖಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ಬಹಿರಂಗಗೊಂಡಿರುವ ವಿಡಿಯೋದಲ್ಲಿ ನನ್ನ ತಾಯಿ ಇರುವ ಬಗ್ಗೆ ಗೊತ್ತಾದ ನಂತರ ಅವರು ಕಾಣೆಯಾಗಿದ್ದಾರೆ ಎಂದು ಕೆ.ಆರ್ ನಗರ ಠಾಣೆಗೆ ಭೇಟಿ ನೀಡಿರುವ ಸಂತ್ರಸ್ತ ದೂರಿನಲ್ಲಿ ತಿಳಿಸಿದ್ದಾನೆ.
ಈ ಸಂಬಂಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಎಚ್.ಡಿ ರೇವಣ್ಣ ಆರೋಪಿ 1 ಹಾಗೂ ಸತೀಶ್ ಬಾಬು ಆರೋಪಿ 2 ಎಂದು ನಮೂದಿಸಲಾಗಿದೆ.





