ಮೈಸೂರು

ಎಚ್‌.ಡಿ ರೇವಣ್ಣಗೆ ಮತ್ತೊಮ್ಮೆ ಸಂಕಷ್ಟ: ಮೈಸೂರಲ್ಲಿ ಪ್ರಕರಣ ದಾಖಲು!

ಮೈಸೂರು: ಪೆನ್‌ಡ್ರೈವ್‌ನಲ್ಲಿ ಇದೆ ಎನ್ನಲಾದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಇತ್ತ ರಾಜ್ಯಾದ್ಯಂತ ಭಾರೀ ಸದ್ದು ಮಾಡಿರುವ ಪೆನ್‌ ಡ್ರೈವ್‌ ಪ್ರಕರಣದಲ್ಲಿ ಶಾಸಕ ಎಚ್‌.ಡಿ ರೇವಣ್ಣ ಈ ಎಲ್ಲಾ ಪ್ರಕರಣಗಳಿಗೆ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿದೆ.

ಈ ಎಲ್ಲದರ ಹೊರತಾಗಿಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ರೇವಣ್ಣ ಹೆಸರು ಕೇಳಿ ಬುರುತ್ತಿದೆ. ಮೈಸೂರು ಜಿಲ್ಲೆಯ ಕೆ.ಆರ್‌ ನಗರದ ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಜೆಡಿಎಸ್‌ ಮುಖಂಡ ಎಚ್‌.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ಕಾಣೆಯಾಗಿರುವ ಮಹಿಳೆ ಪುತ್ರ ಈ ದೂರು ದಾಖಲಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ಬಹಿರಂಗಗೊಂಡಿರುವ ವಿಡಿಯೋದಲ್ಲಿ ನನ್ನ ತಾಯಿ ಇರುವ ಬಗ್ಗೆ ಗೊತ್ತಾದ ನಂತರ ಅವರು ಕಾಣೆಯಾಗಿದ್ದಾರೆ ಎಂದು ಕೆ.ಆರ್‌ ನಗರ ಠಾಣೆಗೆ ಭೇಟಿ ನೀಡಿರುವ ಸಂತ್ರಸ್ತ ದೂರಿನಲ್ಲಿ ತಿಳಿಸಿದ್ದಾನೆ.

ಈ ಸಂಬಂಧ ಸೆಕ್ಷನ್‌ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇದರಲ್ಲಿ ಎಚ್‌.ಡಿ ರೇವಣ್ಣ ಆರೋಪಿ 1 ಹಾಗೂ ಸತೀಶ್‌ ಬಾಬು ಆರೋಪಿ 2 ಎಂದು ನಮೂದಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

2 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

2 hours ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

2 hours ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

2 hours ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

2 hours ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

16 hours ago