ಮೈಸೂರು

ಎನ್‌ಟಿಎ ರದ್ದು ಪಡಿಸಿ, ಸಿಇಟಿ ಜಾರಿಗೊಳಿಸಲು ಎಸ್‌ಎಫ್‌ಐ ಒತ್ತಾಯ

ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್‌ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್‌ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು ಪುತ್ಥಳಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು ಎನ್‌ಟಿಎ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇದರಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ನಡೆಸಬೇಕು. ನೀಟ್ ಪರೀಕ್ಷೆ ರದ್ದುಗೊಳಿಸಿ ಸಿಇಟಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ತನಿಖೆ ನಡೆಯಬೇಕು. ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಧೀಶರ ಸಮಿತಿ ರಚನೆ ಮಾಡಿ ತನಿಖೆಯಾಗಬೇಕು. ಎಲ್ಲಾ ರಾಷ್ಟ್ರಿಯ ಪರೀಕ್ಷೆಗಳನ್ನು ಸಂವಿಧಾನದ ಎಂಟನೇ ಶೇಡ್ಯೂಲ್ ಅಲ್ಲಿ ತಿಳಿಸಿರುವ 22 ಭಾಷೆಗಳಲ್ಲೂ ನಡೆಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮದ ನೇರ ಹೊಣೆಯನ್ನು ಕೇಂದ್ರ ಸರ್ಕಾರದ ಶಿಕ್ಷಣ ಸಚಿವರಾದ ಧರ್ಮೇದ್ರ ಪ್ರಧಾನ್ ಒತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಅಖಿಲ ಭಾರತ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣ್, ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಅಭಿ ಡಿ, ಮುಖಂಡರಾದ ಚಿರಾಗ್ ಎಸ್ ಕೆ, ಪ್ರಜ್ವಲ್, ಮೇಘ ಶ್ರೀ, ಭರತ್‌ ಸೇರಿದಂತೆ ವಿದ್ಯಾರ್ಥಿ ಸಮೂಹ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

8 mins ago

ಫಾಸ್ಟ್‌ಟ್ಯಾಗ್ ಇಲ್ಲದಿದ್ದರೆ ಹೆದ್ದಾರಿಗಿಲ್ಲ ಪ್ರವೇಶ

ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…

53 mins ago

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

60 mins ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

1 hour ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

2 hours ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

3 hours ago