ಮೈಸೂರು: ರಾಷ್ಟ್ರೀಯ ಪರೀಕ್ಷೆ ಸಂಸ್ಥೆಯನ್ನು(ಎನ್‌ಟಿಎ) ರದ್ದು ಪಡಿಸಿ, ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಭಾರತೀಯ ವಿದ್ಯಾರ್ಥಿ ಫೆಡರೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಂದು(ಜೂ.24) ಮಾನಸಗಂಗೋತ್ರಿಯ ಕುವೆಂಪು ಪುತ್ಥಳಿ ಮುಂದೆ ಜಮಾವಣೆಗೊಂಡ ಪ್ರತಿಭಟನಾಕಾರರು ಎನ್‌ಟಿಎ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇದರಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ನಡೆಸಬೇಕು. ನೀಟ್ ಪರೀಕ್ಷೆ ರದ್ದುಗೊಳಿಸಿ ಸಿಇಟಿ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರ ಪಾತ್ರದ ಬಗ್ಗೆ ಪಾರದರ್ಶಕ ತನಿಖೆ ನಡೆಯಬೇಕು. ಈ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಧೀಶರ ಸಮಿತಿ ರಚನೆ ಮಾಡಿ ತನಿಖೆಯಾಗಬೇಕು. ಎಲ್ಲಾ ರಾಷ್ಟ್ರಿಯ ಪರೀಕ್ಷೆಗಳನ್ನು ಸಂವಿಧಾನದ ಎಂಟನೇ ಶೇಡ್ಯೂಲ್ ಅಲ್ಲಿ ತಿಳಿಸಿರುವ 22 ಭಾಷೆಗಳಲ್ಲೂ ನಡೆಸಬೇಕು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮದ ನೇರ ಹೊಣೆಯನ್ನು ಕೇಂದ್ರ ಸರ್ಕಾರದ ಶಿಕ್ಷಣ ಸಚಿವರಾದ ಧರ್ಮೇದ್ರ ಪ್ರಧಾನ್ ಒತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಅಖಿಲ ಭಾರತ ಜಂಟಿ ಕಾರ್ಯದರ್ಶಿ ನಿತೀಶ್ ನಾರಾಯಣ್, ಎಸ್ ಎಫ್ ಐ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಅಭಿ ಡಿ, ಮುಖಂಡರಾದ ಚಿರಾಗ್ ಎಸ್ ಕೆ, ಪ್ರಜ್ವಲ್, ಮೇಘ ಶ್ರೀ, ಭರತ್ ಸೇರಿದಂತೆ ವಿದ್ಯಾರ್ಥಿ ಸಮೂಹ ಇದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…