ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಕ್ಷೇತ್ರದಲ್ಲಿರುವ ಪಾರ್ವತಮ್ಮ- ಶಾಮನೂರು ಶಿವಶಂಕರಪ್ಪ ಅತಿಥಿ ಗೃಹವನ್ನು ಇಂದು (ಫೆ.11) ಕೇಂದ್ರ ಸಚಿವ ಅಮಿತ್ ಶಾ ಉದ್ಘಾಟಿಸಿದರು.
ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದವರು 12 ಕೋಟಿ ವೆಚ್ಚದಲ್ಲಿ ಈ ಅತಿಥಿ ಗೃಹ ನಿರ್ಮಿಸಿದ್ದಾರೆ.
ಸುತ್ತೂರು ಮಠಾಧೀಶ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕೇಂದ್ರ ಸಚಿವ ಪ್ರಲಾದ ಜೋಶಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಪ್ರತಾಪ ಸಿಂಹ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಪಾಲ್ಗೊಂಡಿದ್ದರು.