ನಂಜನಗೂಡು: ಇಲ್ಲಿನ ಶೃಂಗೇರಿ ಶಂಕರ ಮಠದ ಆಶ್ರಯದಲ್ಲಿ ನಾಲ್ಕು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.
ಪ್ರಸಕ್ತ ವರ್ಷದ ಶಂಕರ ಜಯಂತಿಯು ಮೇ ೯ರ ಗುರುವಾರದಿಂದ ೧೨ರವರೆಗೂ ನಡೆಯಲಿದೆ. ಈ ನಾಲ್ಕೂ ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಜೊತೆಗೆ ಭಜನೆ, ಭಕ್ತಿಗೀತೆ ಹಾಗೂ ಭರತ ನಾಟ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜಯಂತಿಯ ಕೊನೆದಿನವಾದ ಭಾನುವಾರ ಶಂಕರ ಭಗವತ್ಪಾದರ ಉತ್ಸವ ಮೂರ್ತಿ ಮೆರವಣಿಗೆ ನಡೆಯಲಿದೆ. ನಂತರ ಮಠದ ಆಶ್ರಯದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಸಮಾಜ ಸೇವಕ ಎಂ.ಎನ್.ಪದ್ಮನಾಭರಾವ್ ಮತ್ತು ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಆರ್.ಗೋವರ್ಧನ್ ಭಾಗಿಯಾಗಲಿದ್ದಾರೆ ಎಂದು ಮಠದ ಧರ್ವಾಧಿಕಾರಿ ಶ್ರೀಕಂಠ ಜೋಸ್ ತಿಳಿಸಿದ್ದಾರೆ.
ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…
ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…
ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…
೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…
ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…