ಪ್ರಶಾಂತ್ ಎನ್.ಮಲ್ಲಿಕ್
ಮೈಸೂರು: ರಾಜ್ಯ ಸರ್ಕಾರವೂ ಸರ್ಕಾರ ನೌಕರರಿಗೆ ಸಂಬಳ ನೀಡದಷ್ಟು ದಿವಾಳಿಯಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.4) 7ನೇ ವೇತನದ ಹೆಚ್ಚುವರಿ ವೇತನ ಭರಿಸಲು ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಹೆಚ್ಚುವರಿ ವೇತನವನ್ನು ಸ್ಥಳೀಯ ಸಂಸ್ಥೆಗಳ ಆರ್ಥಿಕ ಮೂಲದಿಂದ ಭರಿಸಬೇಕೆಂದು ನಿರ್ದೇಶನ ನೀಡಿದೆ. ಹಾಗಾದರೆ ಯಾವ ಪುರುಷಾರ್ಥಕ್ಕಾಗಿ 7ನೇ ವೇತನ ಜಾರಿ ಮಾಡಬೇಕಿತ್ತು. ಸ್ಥಳೀಯ ಸಂಸ್ಥೆಗಳ ಮೂಲಕ ವೇತನ ಭರಿಸುವುದಾದರೆ, ಸಾರ್ವಜನಿಕರ ಮೇಲೆ ಹೆಚ್ಚಿನ ತೆರಿಗೆ ವಿಧಿಸಬೇಕಾಗುತ್ತದೆ. ಹೀಗಾಗಿ ಸರ್ಕಾರ ಈ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ನೌಕರರಿಗೆ ಹೆಚ್ಚುವರಿ ವೇತನ ಕೊಡಲು ಹೆಣಗಾಡುತ್ತಿರುವ ಸರ್ಕಾರವವೂ ಇನ್ನು ಮುಂದೆ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಸ್ಥಳೀಯ ಸಂಸ್ಥೆಯಿಂದಲೇ ವೇತನ ಭರಿಸಬೇಕು. ಅಲ್ಲದೇ
ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವ ನೌಕರರ ಹೆಚ್ಚುವರಿ ವೇತನ ಭರಿಸಲು ಸೂಚನೆ ನೀಡಬೇಕು. ಜೊತೆಗೆ ತೆರಿಗೆಯನ್ನು 15ನೇ ಹಣಕಾಸು ಅನುದಾನಗಳಲ್ಲಿ ಭರಿಸಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು: ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬಾರದು ಎಂದು ಬಾಬಾಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ ಎನ್ನುವ ಹಸಿ ಹಸಿ ಸುಳ್ಳನ್ನು ದೇಶದ ಪ್ರಧಾನಿಯಾಗಿರುವ…
ಶಿವರಾಜಕುಮಾರ್ ಮಗಳು ನಿವೇದಿತಾ ಶಿವರಾಜಕುಮಾರ್ ತಮ್ಮ ಶ್ರೀ ಮುತ್ತು ಸಿನಿ ಕ್ರಿಯೇಷನ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿರುವ ‘ಫೈರ್ ಫ್ಲೈ’ ಚಿತ್ರವು…
ಕನ್ನಡದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರಗಳು ಹೆಚ್ಚಾಗಿವೆ. ಮನಸ್ಸಿನ ವಿವಿಧ ಮುಖಗಳನ್ನು ಪರಿಚಯಿಸುವ ಚಿತ್ರಗಳು ಹೆಚ್ಚು ಹೆಚ್ಚು ಬಿಡುಗಡೆಯಾಗುತ್ತಿವೆ.…
ನವದೆಹಲಿ: ಈ ಬಾರಿ ಮುಂಗಾರು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ತರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೂ…
ನವದೆಹಲಿ: ಆಸ್ಪತ್ರೆಯು ನವಜಾತ ಶಿಶುಗಳನ್ನು ಕಳ್ಳಸಾಗಣೆ ಮಾಡಿದರೆ ಅಂತಹ ಆಸ್ಪತ್ರೆಗಳ ಪರವಾನಗಿಯನ್ನು ಕೂಡಲೇ ರದ್ದು ಮಾಡಿ ಎಂದು ಸುಪ್ರೀಂಕೋರ್ಟ್ ಮಹತ್ವದ…
ಬೆಂಗಳೂರು: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರು ಮುಷ್ಕರ ನಡೆಸುತ್ತಿದ್ದು, ಲಾರಿ ಸಂಚಾರ ಬಂದ್ ಆಗಿವೆ. ಈ ಹಿನ್ನೆಲೆಯಲ್ಲಿ…