ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಮೂರನೇ ದಿನವಾದ ಇಂದು ಶಿವರಾತ್ರೀಶವರ ಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಸಹಸ್ರಾರು ಸಂಖ್ಯೆಯ ಭಕ್ತರು ಭಾಗಿಯಾಗಿ ರಥೋತ್ಸವವನ್ನು ಕಣ್ತುಂಬಿಕೊಂಡರು.
ಮಠದಲ್ಲಿ ಇಂದು ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ಸುತ್ತೂರಿನ ಕರ್ತೃ ಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಭಕ್ತರು, ದೊಡ್ಡ ಗಾತ್ರದ ರಥದ ಹಗ್ಗವನ್ನು ಎಳೆದು ಹರಕೆ ತೀರಿಸಿದರು. ಬಳಿಕ ರಥಕ್ಕೆ ಹಣ್ಣು-ಜವನ ಎಸೆದು ನಮಿಸಿದರು. ತಮಟೆ, ನಗಾರಿ ವಾದ್ಯಗಳ ನಾದ ಮುಗಿಮು ಮುಟ್ಟಿತ್ತು. ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು.




