ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಮೂರನೇ ದಿನವಾದ ಇಂದು ಶಿವರಾತ್ರೀಶವರ ಶಿವಯೋಗಿಗಳ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಸಹಸ್ರಾರು ಸಂಖ್ಯೆಯ ಭಕ್ತರು ಭಾಗಿಯಾಗಿ ರಥೋತ್ಸವವನ್ನು ಕಣ್ತುಂಬಿಕೊಂಡರು.
ಮಠದಲ್ಲಿ ಇಂದು ಬೆಳಿಗ್ಗೆಯಿಂದಲೇ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ಸುತ್ತೂರಿನ ಕರ್ತೃ ಗದ್ದುಗೆಯ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಭಕ್ತರು, ದೊಡ್ಡ ಗಾತ್ರದ ರಥದ ಹಗ್ಗವನ್ನು ಎಳೆದು ಹರಕೆ ತೀರಿಸಿದರು. ಬಳಿಕ ರಥಕ್ಕೆ ಹಣ್ಣು-ಜವನ ಎಸೆದು ನಮಿಸಿದರು. ತಮಟೆ, ನಗಾರಿ ವಾದ್ಯಗಳ ನಾದ ಮುಗಿಮು ಮುಟ್ಟಿತ್ತು. ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ವಾರ್ಷಿಕ…
ಮೈಸೂರು: ಸರ್ಕಾರದ ಸ್ವಾಧೀನಕ್ಕೆ ಪಡೆಯಬೇಕಾದ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮ ಆಡಳಿತ ಮಹಿಳಾ ಅಧಿಕಾರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿ…
ಮೈಸೂರು: ಮುಂದಿನ 2028ರವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಮೈಸೂರು ಜಿಲ್ಲಾ…
ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ…
ಬೆಂಗಳೂರು: ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟದ ವೇಳೆ ನಾವು ರಾಜಕೀಯ ಚರ್ಚೆ ಮಾಡಿಲ್ಲ ಎಂದು ಗೃಹ ಸಚಿವ ಜಿ…
ಮೈಸೂರು: ಮಹಾರಾಷ್ಟ್ರದ ಮುಂಬೈ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿರುವ ಹಿನ್ನೆಲೆಯಲ್ಲಿ ಮೈಸೂರು ಮಾಜಿ ಮೇಯರ್ ಶಿವಕುಮಾರ್…