ಮೈಸೂರು

ಶಿವರಾತ್ರಿ ಸಂಭ್ರಮ: ಜಿಲ್ಲಾಡಳಿತದಿಂದ ಚಿನ್ನದ ಕೊಳಗ ಅರಮನೆಗೆ ಹಸ್ತಾಂತರ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಾಳೆ ನಗರದ್ಯಾದಂತ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಜಿಲ್ಲಾಡಳಿತದಿಂದ ಮೈಸೂರಿನ ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಾಲಯಕ್ಕೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ.

ಜಿಲ್ಲಾಡಳಿತ ಖಜಾನೆಯಿಂದ ಇಂದು(ಫೆಬ್ರವರಿ.25) ಅರಮನೆ ಆವರಣದ ಆಡಳಿತ ಮಂಡಳಿಗೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ. ಇದನ್ನು ನಾಳೆ(ಫೆ.26) ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ತ್ರೀನೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ ಬಳಿಕ ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ.

ಮೈಸೂರು ಸಂಸ್ಥಾನದ ಅಂದಿನ ಅರಸ ಜಯಚಾಮರಾಜೇಂದ್ರ ಒಡೆಯರ್‌ ಅವರು ಈ ಚಿನ್ನದ ಕೊಳಗವನ್ನು 1952 ರಲ್ಲಿ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್‌ ಹುಟ್ಟಿದ ನೆನಪಿನಾರ್ಥ ತ್ರೀನೇಶ್ವರ ದೇವಾಲಯಕ್ಕೆ ಕೊಡುಗೆ ನೀಡಿರುವ ಚಿನ್ನದ ಮುಖವಾಡವಾಗಿದೆ. ಈ ಚಿನ್ನದ ಕೊಳಗ ಸುಮಾರು 11 ಕೆ.ಜಿ. ಇದೆ. ಇದನ್ನು ಪ್ರತಿ ವರ್ಷ ಶಿವರಾತ್ರಿ ಹಬ್ಬದ ದಿನದಂದು ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ. ಹೀಗಾಗಿ ತ್ರೀನೇಶ್ವರ ದೇವಾಲಯಕ್ಕೆ ನಾಳೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

9 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

9 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

10 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

10 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

10 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

11 hours ago