ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್ ಸಿಬ್ಬಂದಿ ಕೊರತೆಯಿಂದ ಪೊಲೀಸ್ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮ ದೊಡ್ಡ ಹೋಬಳಿ ಕೇಂದ್ರವಾಗಿದ್ದು, 40 ವರ್ಷಗಳ ಹಿಂದೆ ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ತೆರೆಯಲಾಗಿದ್ದ ಉಪ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಪೊಲೀಸ್ ಠಾಣೆಗೆ ಬೀಗ ಹಾಕಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಚಿವ ಎಚ್.ಸಿ.ಮಹದೇವಪ್ಪ ಪ್ರತಿನಿಧಿಸುವ ಮೂಗೂರು ಕ್ಷೇತ್ರದ ಉಪ ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಒಬ್ಬ ಮುಖ್ಯ ಪೇದೆ ಹಾಗೂ ಒಬ್ಬ ಪೇದೆ ಮಾತ್ರ ಈ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಈ ಇಬ್ಬರೂ ಸಿಬ್ಬಂದಿ ಬೇರೆ ಕಡೆಗೆ ಬಂದೋಬಸ್ತ್ ಕೆಲಸಕ್ಕಾಗಿ ನಿಯೋಜನೆಗೊಂಡಿದ್ದಾರೆ. ಈ ಮಧ್ಯೆ ಪೊಲೀಸ್ ಠಾಣೆಗೆ ಸಿಬ್ಬಂದಿ ನೇಮಕ ಮಾಡಿ. ಈ ಗ್ರಾಮಕ್ಕೆ ಪೊಲೀಸ್ ಠಾಣೆ ಇರಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆದೇಶದಂತೆ ಮೈಸೂರು ನಗರ ಡಿಸಿಪಿ ಮುತ್ತುರಾಜು ನನ್ನ ವಿರುದ್ಧ ಕೆ.ಆರ್ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ಪ್ರಕರಣ…
ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ…
ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ…
ಬೆಳಗಾವಿ : ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ…
ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ರಚಿತ ಪುಸ್ತಕಗಳ ಮಾರಾಟ ಮಳಿಗೆ ತೆರೆದಿದು, ಪುಸ್ತಕ…
ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ…