Mysore
23
scattered clouds

Social Media

ಸೋಮವಾರ, 30 ಡಿಸೆಂಬರ್ 2024
Light
Dark

ಮೈಸೂರು ಕೊಡಗು ಲೋಕಸಭಾ ಚುನಾವಣೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ನಿಗಾವಹಿಸಿ : ಸುರೇಶ್.ಎ

ಮೈಸೂರು : ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಯಲು ನಿಗದಿಪಡಿಸಿರುವ ವೆಚ್ಚದಂತೆ ಅಭ್ಯರ್ಥಿಗಳು ಹಣ ವೆಚ್ಚ ಮಾಡುತ್ತಿರುವ ಬಗ್ಗೆ ತೀವ್ರ ನಿಗಾ ಇಡಬೇಕು ಎಂದು ಹುಣಸೂರು ಹಾಗೂ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಸುರೇಶ್ . ಎ ಅವರು ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯಕ ವೆಚ್ಚ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

ಎಂಸಿಸಿ ತಂಡಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು.

ಸಹಾಯಕ ವೆಚ್ಚ ವೀಕ್ಷಕರು, ಫ್ಲೈಯಿಂಗ್ ಸ್ಕ್ವಾಡ್‍ಗಳು, ವೀಡಿಯೋ ಸರ್ವೆಲನ್ಸ್, ವಿಡಿಯೋ ವಿವ್ಹಿಂಗ್ ತಂಡಗಳು, ಸ್ಟ್ಯಾಟಿಕ್ ಸರ್ವೆಲನ್ಸ್ ತಂಡಗಳು ಇನ್ನೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕು.

ಮುಕ್ತ, ನ್ಯಾಯಸಮ್ಮತ ಚುನಾವಣೆ ನಡೆಸಲು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಚುನಾವಣಾಧಿಕಾರಿಗಳು ಈಗಾಗಲೇ ಚುನಾವಣಾ ಖರ್ಚು ವೆಚ್ಚದ ನಿಗಾ ಕುರಿತು ಜಿಲ್ಲೆಯ ವಿಧಾನಸಭಾ ಕ್ಷೇತ್ರದ ಎಇಆರ್‍ಓ ಅಧಿಕಾರಿಗಳೊಂದಿಗೆ ಸಿದ್ದತೆ ಮಾಡಿಕೊಡಿದ್ದಾರೆ.

ಚುನಾವಣೆ ಕರ್ತವ್ಯವನ್ನು ನಿಷ್ಪಕ್ಷ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ನಿಯೋಜನೆಗೊಂಡ ಎಲ್ಲ ತಂಡಗಳೂ ಖರ್ಚು ವೆಚ್ಚಗಳ ಬಗ್ಗೆ ಗಮನ ವಹಿಸಬೇಕು.

ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚಗಳ ಬಗ್ಗೆಯೂ ತೀವ್ರ ನಿಗಾ ಇಡಬೇಕು ಎಂದು ನಿರ್ದೇಶನ ನೀಡಿದರು.

ಚುನಾವಣಾ ಅಭ್ಯರ್ಥಿ ಪ್ರಚಾರಕ್ಕಾಗಿ ಬಂದಂತಹ ಸಂದರ್ಭದಲ್ಲಿ, ತಂಡಗಳು ಕಾರ್ಯಕ್ರಮ ಅಥವಾ ಸಮಾರಂಭಗಳಲ್ಲಿ ಆಗುವಂತಹ ಖರ್ಚು ವೆಚ್ಚಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದರು.

ಅನಧಿಕೃತ ಮದ್ಯ ಸಾಗಾಣಿಕೆ ಬಗ್ಗೆ ನಿಗಾ ವಹಿಸಿ ಅನಧಿಕೃತವಾಗಿ ಮದ್ಯ ಸಾಗಾಣಿಕೆ ಹಾಗೂ ಸಂಗ್ರಹಣೆಯ ಬಗ್ಗೆ ವಿವಿಧ ತಂಡಗಳು ಹೆಚ್ಚು ನಿಗಾ ವಹಿಸಬೇಕು.

ಸೂಕ್ಷ್ಮ ಸ್ಥಳಗಳಲ್ಲಿರುವ ಮದ್ಯದ ಅಂಗಡಿಗಳನ್ನು ಪಟ್ಟಿ ಮಾಡಿಕೊಂಡು ಅಬಕಾರಿ ಇಲಾಖೆಯ ಅವರು ತೀವ್ರ ಗಮನ ಹರಿಸಬೇಕು ಎಂದರು.

ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಸಂಶಯಾಸ್ಪದ ವಹಿವಾಟು, ಹೆಚ್ಚಿನ ಹಣ ವರ್ಗಾವಣೆ, ಒಂದು ಖಾತೆಯಿಂದ ಹೆಚ್ಚಿನ ಖಾತೆಗೆ ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು ಎಂದರು.

ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಅಕೌಂಟಿಂಗ್ ಟೀಂ ನವರು ಶ್ಯಾಡೋ ರಿಜಿಸ್ಟರ್ ಸೇರಿದಂತೆ ವಿವಿಧ ಕಡತ ನಿರ್ವಹಣೆಯ ಬಗ್ಗೆ, ರಾಜಕೀಯ ಪಕ್ಷಗಳಿಗೆ ಪ್ರಚಾರಕ್ಕಾಗಿ ಅನುಮತಿ ನೀಡಲು ತೆರೆದಿರುವ ಏಕಗವಾಕ್ಷಿ ಕೇಂದ್ರ ಸೇರಿದಂತೆ ಮಾಡಿಕೊಂಡಿರುವ ವ್ಯವಸ್ಥೆಗಳ ಬಗ್ಗೆ ವಿವರಿಸಿದರು.

ಸಹಾಯಕ ಚುನಾವಣಾಧಿಕಾರಿಗಳು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಅಧಿಕಾರಿಗಳು ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷಗಳಿಗೆ ನಿಗದಿಯಾಗುವ ಚುನಾವಣಾ ವೆಚ್ಚದ ಕುರಿತು ಸರಿಯಾದ ಲೆಕ್ಕಪತ್ರಗಳು ಇರಬೇಕು.

ಈ ಸಂಬಂಧ ಯಾವುದೇ ಗೊಂದಲಕ್ಕೆ ಒಳಗಾಗದೇ ಎಲ್ಲ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯ ನಂತರ ವೆಚ್ಚ ವೀಕ್ಷಕರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ‌ ಸ್ಥಾಪಿತವಾಗಿರುವ ಕಂಟ್ರೋಲ್ ರೂಂ, ಮಾಧ್ಯಮ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: