ಬೆಂಗಳೂರು: ಸಹಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಬೆಂಗಳೂರಿನ ಬಸವನಗುಡಿಯ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್ ಈ ಬಾರಿಯೂ ಲಾಭದತ್ತ ಸಾಗಿದ್ದು, ಒಟ್ಟಾರೆ 2.89 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.
ಬ್ಯಾಂಕ್‌ನ 28 ನೇ ಸರ್ವ ಸದಸ್ಯರ ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ಧ್ವಾರಕನಾಥ್ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಕಳೆದ ವರ್ಷ ಬ್ಯಾಂಕ್ 2.85 ಕೋಟಿ ರೂಪಾಯಿ ಲಾಭಗಳಿಸಿತ್ತು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿ ಮಾತನಾಡಿದ ಬಿ.ವಿ.ಧ್ವಾರಕನಾಥ್, ಸಹಕಾರಿ ವಲಯದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಗ್ರಾಹಕರ ಹಿತರಕ್ಷಣೆಗೆ ಒತ್ತು ನೀಡಿರುವ ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸುತ್ತಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಗ್ರಾಹಕ ಸ್ನೇಹಿ ಜೊತೆಗೆ ಆರ್ಥಿಕ ಶಿಸ್ತಿಗೆ ಒತ್ತು ನೀಡಲಾಗುವುದು. ಆರ್‌ಬಿಐ ನಿಂದ ಬ್ಯಾಂಕಿಗೆ ಸೂಕ್ತ ರೀತಿಯಲ್ಲಿ ಮನ್ನಣೆ ದೊರೆತಿದ್ದು, ಇದನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.
ಬ್ಯಾಂಕಿನ ಗ್ರಾಹಕ ಹಾಗೂ ಚಲನಚಿತ್ರ ನಿರ್ಮಾಪಕ ಬಿ.ಕೆ ಶ್ರೀನಿವಾಸ್ (ನಿರ್ಮಾಪಕ ಬೆಂಕೋಶ್ರಿ) ಮಾತನಾಡಿ, ಬ್ಯಾಂಕ್ ನಲ್ಲಿ ಗ್ರಾಹಕರ ರಕ್ಷಣೆ ಜೊತೆಗೆ ಉತ್ತಮ ಆಡಳಿತದ ಕಾರಣಕ್ಕಾಗಿ ಲಾಭ ಗಳಿಸುತ್ತಿದೆ. ಇಂತಹ ಉತ್ತಮ ಸತ್ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…