ಮೈಸೂರು

ಡಿಸಿಎಂ ಡಿ.ಕೆ.ಶಿವಕುಮಾರ್‌ರನ್ನು ಶೀಘ್ರವೇ ಬಂಧಿಸಬೇಕು: ಶಾಸಕ ಶ್ರೀವತ್ಸ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಂವಿಧಾನ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ್ದು, ಇಂತಹ ಸಂವಿಧಾನ ವಿರೋಧಿಯನ್ನು ಶೀಘ್ರವೇ ಬಂಧಿಸಬೇಕು ಎಂದು ಬಿಜೆಪಿ ಶಾಸಕ ಟಿ.ಎಸ್‌.ಶ್ರೀವತ್ಸ ಆಗ್ರಹಿಸಿದ್ದಾರೆ.

ಮೈಸೂರಿನ ಆಶೋಕಪುರಂ ಪೊಲೀಸ್ ಠಾಣೆಯ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪ್ರತಿಮೆ ಮುಂಭಾಗ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ನಡೆಸುವ ಮುನ್ನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ದಲಿತ ವಿರೋಧಿ ಕಾಂಗ್ರೆಸ್‌ಗೆ ಧಿಕ್ಕಾರ, ಸಂವಿಧಾನ ವಿರೋಧಿ ಡಿ.ಕೆ.ಶಿವಕುಮಾರ್‌ಗೆ ಧಿಕ್ಕಾರ ಹಾಗೂ ಜೈ ಭೀಮ್ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಯ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಸಂವಿಧಾನ ಬದಲಾವಣೆ ಮಾಡುತ್ತೇವೆಂದು ಹೇಳಿರುವ ಹೇಳಿಕೆ ಬಹಳ ಖಂಡನೀಯವಾಗಿದೆ. ಈ ಕೂಡಲೇ ಕಾಂಗ್ರೆಸ್‌ ಸರ್ಕಾರ ಡಿಕೆಶಿ ಅವರನ್ನು ಉಪ ಮುಖ್ಯಮಂತ್ರಿಯಿಂದ ವಜಾ ಮಾಡಬೇಕು ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್‌ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ. ಅವರ ಮೇಲೆ ಸುಮೋಟೋ ಕೇಸ್ ಹಾಕಿ ಆರೆಸ್ಟ್ ಮಾಡಬೇಕು. ಆದರೆ ಪೊಲೀಸರು ಅವರ ಮೇಲೆ ಯಾಕೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹನಿಟ್ರ್ಯಾಪ್ ವಿಚಾರದಲ್ಲೂ ಡಿಕೆಶಿ ಅವ ಹೆಸರು ಕೇಳಿ ಬಂದಿದೆ. ಅಲ್ಲದೇ ಈಗ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದು ಹೇಳುತ್ತಾರೆ ಹೀಗಾಗಿ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಒತ್ತಾಯಿಸಿದರು.

 

ಅರ್ಚನ ಎಸ್‌ ಎಸ್

Recent Posts

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

28 mins ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

54 mins ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

1 hour ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

1 hour ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

2 hours ago

ಗುಂಡ್ಲುಪೇಟೆ: ಬೇರಂಬಾಡಿ ಬಳಿ ಅರಣ್ಯ ಇಲಾಖೆಯಿಂದ ಹುಲಿ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…

2 hours ago