ಮೈಸೂರು: ನಂಜನಗೂಡಿನ ಮಲ್ಲನಮೂಲೆ ಮಠದ ಚನ್ನಬಸವಸ್ವಾಮೀಜಿ ಲಿಂಗೈಕ್ಯರಾಗಿದ್ದು, ಸಂಜೆ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
ನಂಜನಗೂಡು ತಾಲ್ಲೂಕಿನ ಬಸವನಪುರದ ಮಲ್ಲನಮೂಲೆ ಸುಕ್ಷೇತ್ರ ಗುರು ಕಂಬಳೇಶ್ವರ್ ಮಠಾಧ್ಯಕ್ಷರಾಗಿದ್ದ ಶ್ರೀ ಚನ್ನಬಸವ ಸ್ವಾಮೀಜಿ ನಿನ್ನೆ ಅನಾರೋಗ್ಯದಿಂದ ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಮಠದ ಆವರಣದಲ್ಲಿ ಇಂದು ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, ಸಂಜೆ 4 ಗಂಟೆಗೆ ಮಠಾಧೀಶರುಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.





