ಮೈಸೂರು

ಸಾರ್ವಜನಿಕರನ್ನು ಆಯಸ್ಕಾದಂತೆ ಸೆಳೆದಿದ್ದ ಪ್ರಸಾದ್‌: ಎಸ್‌.ಎಂ ಕೃಷ್ಣ ಶ್ಲಾಘನೆ

ಮೈಸೂರು: 50 ವರ್ಷಗಳ ಹಿಂದೆ ಚುನಾವಣಾ ರಾಜಕೀಯ ಪ್ರವೇಶಿಸಿದ ಪ್ರಸಾದ್‌ ಅವರು ಪ್ರಬುದ್ದ ರಾಜಕಾರಿಣಿಯಾಗಿ ಸಾರ್ವಜನಿಕರನ್ನು ಆಯಸ್ಕಾಂತದಂತೆ ಸೆಳೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಶ್ಲಾಘಿಸಿದರು.

ನಗರದ ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ಇತ್ತೀಚೆಗೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರ ರಾಜಕೀಯ ಸುವರ್ಣ ಮಹೋತ್ಸವ ಅಭಿನಂದನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

1974ರಲ್ಲಿ ಡಿ.ದೇವರಾಜು ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ನಾನು ಮತ್ತು ಅರಸು ಅವರು ಯುವ ನಾಯಕರಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಿದ್ದ ಪ್ರಸಾದ್‌ ಅವರನ್ನು ಸೋಲಿಸಲು ಸ್ವಲ್ಪ ದಿನಗಳ ಕಾಲ ಮೈಸೂರಿನಲ್ಲಿಯೇ ಉಳಿದಿದ್ದೆವು. ಆ ಸಮಯದಲ್ಲಿ ನಮಗೆ ಪ್ರಸಾದ್‌ ಅವರ ಪ್ರಬುದ್ಧತೆ ಹಾಗೂ ವರ್ಚಸ್ಸು ಪರಿಚಯವಾಯಿತು ಎಂದು ಹೇಳಿದರು.

ಆಗಿನ ಕಾಲದಲ್ಲಿ ಚುನಾವಣೆ ನಡೆದರೆ ಸಾರ್ವಜನಿಕರೇ ಹಣ ನೀಡುತ್ತಿದ್ದರು. ಆ ಕಾಲದ ಸಮಯದಲ್ಲಿ ಚುನಾವಣಾ ಆಯೋಗವು ಶಿಸ್ತಿಗೆ ಬದ್ದವಾಗಿದ್ದು, ಆಯೋಗವೆಂದರೆ ಅಭ್ಯರ್ಥಿಗಳೇ ಭಯ ಪಡುತ್ತಿದ್ದರು ಎಂದರು.

ನಗರದ ಅಶೋಕಪುರಂಗೆ ಉಪ ಚುನಾವಣೆಯ ಸಂದರ್ಭದಲ್ಲಿ ಮತ ಕೇಳಲು ಹೋಗಿದ್ದಾಗ ಎಲ್ಲ ಮನೆಗಳಲ್ಲೂ ಅವರ ಬೆಂಬಲಿಗರೇ ಇರುತ್ತಿದ್ದರು. ಆ ಚುನಾವಣೆಯಲ್ಲಿ ಸೋಲು ಕಂಡರೂ ಕೂಡ ಅತಿ ಹೆಚ್ಚು ಮತಗಳನ್ನು ಪಡೆದು ರಾಜಕೀಯ ಪ್ರಜ್ಞಾವಂತರಾಗಿ ಚುನಾವಣೆಯ ನಾಯಕತ್ವಕ್ಕೆ ಭದ್ರ ಹಾಕಿಕೊಟ್ಟರು. ಹಾಗೆಯೇ 50ವರ್ಷದ ರಾಜಕೀಯ ಜೀವನದಲ್ಲಿ ತೆರೆದ ಪುಸ್ತಕವಿದ್ದಂತೆ ಜೀವಿಸಿದರು ಎಂದು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

11 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

12 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

13 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

17 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

17 hours ago