ಮೈಸೂರು

ಸಿದ್ದರಾಮಯ್ಯ ಸಿಎಂ ಆದ್ರು, ರಾಜ್ಯದಲ್ಲಿ ಬರಗಾಲ ಬಂತು : ಪ್ರತಾಪ್‌ ಸಿಂಹ !

ಮಂಡ್ಯ : ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯಕ್ಕೆ ಬರಗಾಲ ಬಂದಿದೆ ಎಂದು ಸಂಸದ ಪ್ರತಾಪ್‌ ಸಿಂಹ ಟೀಕಿಸಿದ್ದಾರೆ.

ಲೋಕಸಭಾ ಚುನಾವಣೆಯ ಹಿನ್ನಲೆ, ಕೆ.ಆರ್ ಪೇಟೆಯಲ್ಲಿ ಏರ್ಪಡಿಸಲಾಗಿದ್ದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ಹೆಚ್.ಡಿ ಕುಮಾರಸ್ವಾಮಿ ರವರ ಪರವಾಗಿ ಮತಯಾಚಿಸುವ ವೇಳೆ ಅವರು ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಲೆಲ್ಲಾ, ಕೂಡಲೇ ಕರ್ನಾಟಕಕ್ಕೆ ಬರಗಾಲ ಬರುತ್ತದೆ. ಈ ಬಾರಿಯೂ ಸಿದ್ರಾಮಣ್ಣ ಮುಖ್ಯಮಂತ್ರಿ ಆದರು, ರಾಜ್ಯಕ್ಕೆ ಬರಗಾಲ ಬಂದಿದೆ ಎಂದುರು.

ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರಾಜ್ಯದ ಕೆರೆ ಕಟ್ಟೆಗಳೆಲ್ಲ ತುಂಬಿ ಕೋಡಿ ಒಡೆದು ಹರಿದಿತ್ತು. ಬಳಿಕ ೨೦೧೮ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಕೊಡಗಿನಲ್ಲಿ ಪ್ರವಾಹವೇ ಬಂದಿತ್ತು ಎಂದರು.

ಸಿದ್ರಾಮಣ್ಣ ಬಂದ್ರು ಬರಗಾಲ ರಾಜ್ಯಕ್ಕೆ ಬರಗಾಲ ಕಾಲಿಡ್ತು. ಕೆರೆ-ಕಟ್ಟೆಗಳು ತುಂಬುವುದಿರಲಿ. ಇರುವ ನೀರನ್ನು ಉಳಿಸಿಕೊಳ್ಳುವ ಸ್ಥಿತಿ ಇಲ್ಲದಂತಾಗಿದೆ ಎಂದ ಆರೋಪಿಸಿದರು.

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

1 hour ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

2 hours ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

2 hours ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

2 hours ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago