ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ ಆಡಳಿತ ನಡೆಸಲಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹಾರೈಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಇಂದು ರಾಜ್ಯ ಸರ್ಕಾರದ ಕಾರ್ಯವೈಖರಿ ವಿಮರ್ಶೆ ಮಾಡುವುದಿಲ್ಲ. ಮುಖ್ಯಮಂತ್ರಿ ಆಗುತ್ತಿರುವ ಡಿ.ಕೆ.ಶಿವಕುಮಾರ್ ಬಗ್ಗೆಯೂ ಟೀಕೆ ಮಾಡಲ್ಲ. ಸಿದ್ದರಾಮಯ್ಯ ಅವರ ಆಡಳಿತದ ಬಗ್ಗೆಯೂ ವಿಮರ್ಶೆ ಮಾಡುವುದಿಲ್ಲ. ಮೂರು ವರ್ಷಗಳಿಂದಲೂ ಈ ಸರ್ಕಾರವನ್ನು ಟೀಕೆ ಮಾಡಿದ್ದೇನೆ. ಈಗ ಟೀಕೆ ಮಾಡುವ ಸಮಯವಲ್ಲ. ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಅವರ ಮುಂದಿನ ಜೀವನ ಸುಖಕರವಾಗಿರಲಿ ಎಂದರು.
ಮೂರು ವರ್ಷಗಳ ಹಿಂದೆ ಸಿದ್ದರಾಮಯ್ಯ ಯಾವ ರೀತಿ ಸಂಭ್ರಮ, ಸಡಗರದಲ್ಲಿದ್ದರೋ ಅದೇ ರೀತಿ ಈಗ ಡಿ.ಕೆ.ಶಿವಕುಮಾರ್ ಅವರಿಗೆ ಒಳ್ಳೆಯದಾಗಲಿ. ಒಳ್ಳೆಯ ಆಡಳಿತ ಕೊಟ್ಟು ಟೀಕೆಗಳಿಂದ ತಪ್ಪಿಸಿಕೊಳ್ಳಲಿ. ಅವರು ಕೆಟ್ಟ ಆಡಳಿತ ಕೊಟ್ಟರೆ ಟೀಕೆಗಳು ಸಹಜವಾಗಿಯೇ ಸೃಷ್ಟಿಯಾಗುತ್ತವೆ. ಅವರ ನಡೆ, ನುಡಿಯ ಮೇಲೆ ನಮ್ಮ ಮಾತು ನಿಂತಿರುತ್ತದೆ. ಅವರನ್ನು ಈಗಲೇ ವಿಮರ್ಶೆ ಮಾಡಿ ಟೀಕೆ ಮಾಡುವುದು ನನಗೆ ಸರಿ ಅನಿಸುವುದಿಲ್ಲ. 2028ಕ್ಕೆ ಜಾ.ದಳ-ಬಿಜೆಪಿ ಸರ್ಕಾರ ತರಬೇಕೆಂದು ಜನ ನಿರ್ಧರಿಸಿದ್ದಾರೆ. ಇಷ್ಟನ್ನು ಮಾತ್ರ ನಾನು ಹೇಳಬಲ್ಲೇ ಎಂದು ಹೇಳಿದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…