Siddaramaiah government has done injustice to backward classes Mahesh
ಮೈಸೂರು : ಕಾಂಗ್ರೆಸ್ ಸರ್ಕಾರದಲ್ಲಿ ಎರಡು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಂಡು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.
ರಾಜಕೀಯ ಲಾಭಕ್ಕಾಗಿ ಹಿಂದುಳಿದ ವರ್ಗಗಳನ್ನು ಬಳಸಿಕೊಂಡಿರುವ ಸಿದ್ದರಾಮಯ್ಯ ಮಾತೆತ್ತಿದರೆ ಅಕ್ಕಿ ಕೊಟ್ಟೇ ಎಂದು ಹೇಳುತ್ತಾರೆ. ಆದರೆ ದೇವರಾಜ ಅರಸು ಅವರು ಉಳುವವರಿಗೆ ಭೂಮಿ ಕೊಟ್ಟರು. ಹಿಂದುಳಿದ ವರ್ಗಗಳ ನಾಯಕರನ್ನು ಬೆಳೆಸಿದರು. ದೇವರಾಜ ಅರಸು ಅವರೇ ನಿಜವಾದ ಹಿಂದುಳಿದ ವರ್ಗಗಳ ನಾಯಕರು. ಆದರೆ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೊಳ್ಳುತ್ತಾರೆ ಎಂದು ಛೇಡಿಸಿದರು.
ಹಿಂದುಳಿದ ವರ್ಗಗಳ ಜನರಿಗೆ ದ್ರೋಹ ಮಾಡಿರುವ ಸಿದ್ದರಾಮಯ್ಯ ಅವರನ್ನು ಜನರು ಧಿಕ್ಕರಿಸಬೇಕು ಎಂದರು.
ಪ್ರಿಯಾಂಕ ಖರ್ಗೆ ವಿರುದ್ಧ ಕಿಡಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಮೂರು ಮೂರು ಬಾರಿ ಆರ್‌ಎಸ್‌ಎಸ್ ಬ್ಯಾನ್ ಮಾಡಿತ್ತು.
ಇದೀಗ ಮತ್ತೆ ಆರ್‌ಎಸ್‌ಎಸ್ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಖಾರವಾಗಿ ಕಿಡಿಕಾರಿದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್‌ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್‌ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…