ಮೈಸೂರು

ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ ಸಿದ್ದರಾಮಯ್ಯ : ಬಿಜೆಪಿ ವಕ್ತಾರ ಮಹೇಶ್‌ ಆರೋಪ

ಮೈಸೂರು : ಕಾಂಗ್ರೆಸ್‌ ಸರ್ಕಾರದಲ್ಲಿ ಎರಡು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಂಡು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜಕೀಯ ಲಾಭಕ್ಕಾಗಿ ಹಿಂದುಳಿದ ವರ್ಗಗಳನ್ನು ಬಳಸಿಕೊಂಡಿರುವ ಸಿದ್ದರಾಮಯ್ಯ ಮಾತೆತ್ತಿದರೆ ಅಕ್ಕಿ ಕೊಟ್ಟೇ ಎಂದು ಹೇಳುತ್ತಾರೆ. ಆದರೆ ದೇವರಾಜ ಅರಸು ಅವರು ಉಳುವವರಿಗೆ ಭೂಮಿ ಕೊಟ್ಟರು. ಹಿಂದುಳಿದ ವರ್ಗಗಳ ನಾಯಕರನ್ನು ಬೆಳೆಸಿದರು‌. ದೇವರಾಜ ಅರಸು ಅವರೇ ನಿಜವಾದ ಹಿಂದುಳಿದ ವರ್ಗಗಳ ನಾಯಕರು. ಆದರೆ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೊಳ್ಳುತ್ತಾರೆ ಎಂದು ಛೇಡಿಸಿದರು.

ಹಿಂದುಳಿದ ವರ್ಗಗಳ ಜನರಿಗೆ ದ್ರೋಹ ಮಾಡಿರುವ ಸಿದ್ದರಾಮಯ್ಯ ಅವರನ್ನು ಜನರು ಧಿಕ್ಕರಿಸಬೇಕು ಎಂದರು.

ಪ್ರಿಯಾಂಕ ಖರ್ಗೆ ವಿರುದ್ಧ ಕಿಡಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಮೂರು ಮೂರು ಬಾರಿ ಆರ್‌ಎಸ್‌ಎಸ್‌ ಬ್ಯಾನ್ ಮಾಡಿತ್ತು.
ಇದೀಗ ಮತ್ತೆ ಆರ್‌ಎಸ್‌ಎಸ್‌ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಖಾರವಾಗಿ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago