Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ದಸರಾ ಜಾಹೀರಾತು ಟೀಕಿಸಿದ ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು

ಮೈಸೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, “ಕುಂಬಳಕಾಯಿ ಕಳ್ಳರು ಎಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಂಡ” ಹಾಗಾಯಿತು ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ, ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ ಸಂದೇಶ. ವಿಜಯನಗರ ಅರಸರು ವಿಜಯದ ಸಂಕೇತವಾಗಿ ಪ್ರಾರಂಭಿಸಿರುವ ಆಯುಧಪೂಜೆ – ದಸರಾ ಉತ್ಸವವನ್ನು ಮೈಸೂರು ಒಡೆಯರ್ ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದಿದ್ದಾರೆ.

ಜನಪರವಾಗಿರುವ ನಮ್ಮ ಸರ್ಕಾರವನ್ನು ದುಷ್ಟರಿಂದ ರಕ್ಷಿಸು ಎಂದು ಜಾಹೀರಾತಿನ ಮೂಲಕ ಪ್ರಾರ್ಥಿಸಲಾಗಿದೆ. ಇದು ದಸರಾದ ಆಶಯವೂ ಆಗಿದೆ ಎಂದು ಜಾಹೀರಾತನ್ನ ಸಮರ್ಥಿಸಿಕೊಂಡಿದ್ದಾರೆ.

ಇಡೀ ಜಾಹೀರಾತಿನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಹೆಸರು ಹೇಳಿಲ್ಲ. ಬೇರೆ ಯಾರಿಗೂ ಇಲ್ಲದ ಸಮಸ್ಯೆ ಬಿಜೆಪಿಯವರಿಗೆ ಮಾತ್ರ ಯಾಕೆ ಕಾಡಿದೆ? ಇದು “ಕುಂಬಳಕಾಯಿ ಕಳ್ಳರು ಎಂದರೆ ಹೆಗಲು ಮುಟ್ಟಿಕೊಂಡ ಹಾಗಾಯಿತು ಎಂದು ಹೇಳಿದ್ದಾರೆ

 

Tags:
error: Content is protected !!