ಮೈಸೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, “ಕುಂಬಳಕಾಯಿ ಕಳ್ಳರು ಎಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಂಡ” ಹಾಗಾಯಿತು ಎಂದು ಹೇಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ, ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ ಸಂದೇಶ. ವಿಜಯನಗರ ಅರಸರು ವಿಜಯದ ಸಂಕೇತವಾಗಿ ಪ್ರಾರಂಭಿಸಿರುವ ಆಯುಧಪೂಜೆ – ದಸರಾ ಉತ್ಸವವನ್ನು ಮೈಸೂರು ಒಡೆಯರ್ ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದಿದ್ದಾರೆ.
ಜನಪರವಾಗಿರುವ ನಮ್ಮ ಸರ್ಕಾರವನ್ನು ದುಷ್ಟರಿಂದ ರಕ್ಷಿಸು ಎಂದು ಜಾಹೀರಾತಿನ ಮೂಲಕ ಪ್ರಾರ್ಥಿಸಲಾಗಿದೆ. ಇದು ದಸರಾದ ಆಶಯವೂ ಆಗಿದೆ ಎಂದು ಜಾಹೀರಾತನ್ನ ಸಮರ್ಥಿಸಿಕೊಂಡಿದ್ದಾರೆ.
ಇಡೀ ಜಾಹೀರಾತಿನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಹೆಸರು ಹೇಳಿಲ್ಲ. ಬೇರೆ ಯಾರಿಗೂ ಇಲ್ಲದ ಸಮಸ್ಯೆ ಬಿಜೆಪಿಯವರಿಗೆ ಮಾತ್ರ ಯಾಕೆ ಕಾಡಿದೆ? ಇದು “ಕುಂಬಳಕಾಯಿ ಕಳ್ಳರು ಎಂದರೆ ಹೆಗಲು ಮುಟ್ಟಿಕೊಂಡ ಹಾಗಾಯಿತು ಎಂದು ಹೇಳಿದ್ದಾರೆ
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…