ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ ಎಂದು ವಿವರಿಸಿದರು.
ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎಂದರು.
ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಕಿಡಿಕಾರಿದರು.
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು, ಜನರ ದಿಕ್ಕು ತಪ್ಪಿಸಿ ಕಾಲ ಕಳೆದು ಮನೆಗೆ ಹೋದರು ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…