ಮೈಸೂರು

ಸಿದ್ದರಾಮಯ್ಯ ಜೊತೆಗೆ ಬಿಜೆಪಿ ಹಿರಿಯರು ಷಾಮೀಲು : ಪ್ರತಾಪ್ ಸಿಂಹ ಹೀಗೆ ಗುಡುಗಿದ್ದು ಯಾರ ಮೇಲೆ?

ಮೈಸೂರು : ‘ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರ ಮೇಲೆ ಯಾರೂ ಆರೋಪ ಮಾಡದಂತೆ ಒಂದು ಗೌಪ್ಯ ಒಡಂಬಡಿಕೆ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ. ಬಹುಶಃ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿಯ ಅತಿರಥ ಮಹಾರಥರೇ ಷಾಮೀಲಾಗಿರಬಹುದು” ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ತಮ್ಮ ಪಕ್ಷದ ಹಿರಿಯ ನಾಯಕರ ವಿರುದ್ಧವೇ ಪ್ರತಾಪ್ ಸಿಂಹ ಘರ್ಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿರುವಂತೆ ಕಾಣುತ್ತದೆ. ಬಿಜೆಪಿಯವರು ಅಧಿಕಾರಕ್ಕೆ ಬಂದ ಕೂಡಲೇ ಅರ್ಕಾವತಿ ಹಗರಣ, ಡಿ ನೋಟಿಫಿಕೇಶನ್, ಕೆಂಪಣ್ಣ ಆಯೋಗದ ವರದಿ ಮುಂತಾದ ಪ್ರಕರಣಗಳನ್ನು ತೋರಿಸಿ, ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಾರೆ.ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಸರ್ಕಾರದಲ್ಲಿ ಕೇಳಿ ಬಂದಿದ್ದ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಬೆದರಿಕೆಯನ್ನು ಹಾಕುತ್ತಾರೆ. ಯಾರೂ ಯಾರ ವಿರುದ್ಧವೂ ತನಿಖೆ ಮಾಡಲ್ಲ. ಅದನ್ನು ನೋಡಿದರೆ, ಎರಡೂ ಪಕ್ಷದ ಹಿರಿಯ ನಾಯಕರು ಪರಸ್ಪರ ಹೊಂದಾಣಿಕೆ ರಾಜಕೀಯವನ್ನು ಮಾಡುತ್ತಿದ್ದಾರೆಂಬ ಅನುಮಾನಗಳು ಮೂಡುತ್ತಿವೆ” ಎಂದು ಅವರು ಹೇಳಿದ್ದಾರೆ.

ತಮ್ಮ ಮಾತನ್ನು ಮುಂದುವರಿಸಿದ ಅವರು, “ನೀವು (ಕಾಂಗ್ರೆಸ್) ಅಧಿಕಾರಕ್ಕೆ ಬಂದ ತಕ್ಷಣ ನಮ್ಮವರನ್ನು ಹೆದರಿಸುತ್ತೀರಿ. ನಮ್ಮವರು ಅಧಿಕಾರಕ್ಕೆ ಬಂದ ತಕ್ಷಣ ನಿಮ್ಮವರನ್ನು ಹೆದರಿಸುತ್ತಾರೆ. ಇದೆಲ್ಲವೂ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇರಬಹುದೇ’’ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

“ಇಂಥ ಹೊಂದಾಣಿಕೆ ರಾಜಕೀಯವು, ನಿನಗೆ ತುರಿಕೆಯಾದಾಗ ನಾನು ನಿನ್ನ ಬೆನ್ನು ಕೆರೆಯುತ್ತೇನೆ. ನನಗೆ ತುರಿಕೆಯಾದಾಗ ನೀನು ನನ್ನ ಬೆನ್ನು ಕೆರಿ ಎನ್ನುವಂಥ ಹೊಂದಾಣಿಕೆಯ ರಾಜಕೀಯ ಈಗ ಚಾಲ್ತಿಯಲ್ಲಿದೆಯೇನೋ ಎಂದೆನಿಸುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಎಂದಿಗೂ ಹೀಗೆ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡಲ್ಲ. ಕೇವಲ ನಿಮ್ಮಂಥ ಹಿರಿಯ ನಾಯಕರೇ ಇಂಥ ರಾಜಕೀಯ ಮಾಡೋದು’’ ಎಂದು ಅವರು ಚಾಟಿ ಬೀಸಿದ್ದಾರೆ.

ಸಿಂಹ ಸಿಟ್ಟಿಗೆ ಕಾರಣವೇನು? : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಗ್ಯಾರಂಟಿಗಳ ಜಾರಿ ಬಗ್ಗೆಯಾಗಲಿ, ಗ್ಯಾರಂಟಿಗಳ ಗೊಂದಲಗಳ ಬಗ್ಗೆಯಾಗಲೀ ಬಿಜೆಪಿಯ ಯುವ ನಾಯಕರಾದ ಸಿ.ಟಿ. ರವಿ, ಪ್ರತಾಪ್ ಸಿಂಹ ಮುಂತಾದವರು ಬಹಿರಂಗವಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅತ್ತ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ್ ಅವರುಗಳೂ ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಅತಿ ಹಿರಿಯ ನಾಯಕರು ಈ ವಿಚಾರಗಳಲ್ಲಿ ತುಟಿಪಿಟಕ್ಕೆನ್ನುತ್ತಿಲ್ಲ. ಇದೇ ಕಾರಣಕ್ಕಾಗಿ, ಹೊಂದಾಣಿಕೆ ರಾಜಕೀಯ ಇರಬಹುದು ಎಂದು ಚಿಕ್ಕಮಗಳೂರಿನ ಮಾಜಿ ಶಾಸಕ ಸಿ.ಟಿ. ರವಿ ಕೆಲ ದಿನಗಳ ಹಿಂದೆ ಟೀಕಿಸಿದ್ದರು. ಈಗ ಪ್ರತಾಪ್ ಸಿಂಹ ಕೂಡ ಆ ಟೀಕೆಗೆ ದನಿಗೂಡಿಸಿದ್ದಾರೆ.

‘ಈಗಲೂ ಆ ಮಾತಿಗೆ ಬದ್ಧ’ : ತಮ್ಮ ಮಾತಿನ ಲಹರಿಯನ್ನು ಕಾಂಗ್ರೆಸ್ ಕಡೆಗೆ ತಿರುಗಿಸಿದ ಅವರು, ನೀವು (ಕಾಂಗ್ರೆಸ್) ನಮ್ಮ ಸರ್ಕಾರದ ವಿರುದ್ಧ 40 ಪರ್ಸೆಂಟ್ ಲಂಚದ ಆರೋಪ ಮಾಡುತ್ತಿದ್ದೀರಿ. ಅದನ್ನೀಗ ಸಾಬೀತುಪಡಿಸಿ ಎಂದು ಸವಾಲು ಹಾಕಿದರು. 40 ಪರ್ಸೆಂಟ್ ಲಂಚ ಪಡೆಯುತ್ತಿದ್ದವರನ್ನು ಹಿಡಿದು ನೀವು ಶಿಕ್ಷೆ ಕೊಡಿಸಿದ್ದೇ ಆದಲ್ಲಿ, ನಮ್ಮ ಪಕ್ಷವನ್ನು ಸ್ವಚ್ಛಗೊಳಿಸಿದ್ದಕ್ಕಾಗಿ ನಿಮ್ಮ (ಕಾಂಗ್ರೆಸ್ ನಾಯಕರ) ಪಾದಕ್ಕೆ ನಮಸ್ಕಾರ ಮಾಡಿ, ನಿಮ್ಮ ಪಾದ ಪೂಜೆ ಮಾಡುತ್ತೇನೆ. ಈ ಮಾತನ್ನು ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಎಂದು ಅವರು ಪುನರುಚ್ಛರಿಸಿದ್ದಾರೆ.

lokesh

Recent Posts

ಬಸ್-ಲಾರಿ ಡಿಕ್ಕಿ: ಚಾಲಕ ಸಾವು, ಹಲವು ಪ್ರಯಾಣಿಕರಿಗೆ ಗಾಯ

ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ…

2 hours ago

ಓದುಗರ ಪತ್ರ: ಕುಂಭೇಶ್ವರ ಕಾಲೋನಿ ರೈತರ ಜಮೀನು ವಿವಾದ ಪರಿಹರಿಸಿ

ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ…

2 hours ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಅರ್ಧ ಲೀಟರ್ ನೀರಿನ ಬಾಟಲಿ ಕೊರತೆ

ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್…

2 hours ago

ಓದುಗರ ಪತ್ರ: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಯಾವಾಗ?

ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ.…

2 hours ago

ಓದುಗರ ಪತ್ರ: ಅಡ್ಡಾದಿಡ್ಡಿ ವಾಹನ ಚಾಲನೆಗೆ ಕಡಿವಾಣ ಹಾಕಿ

ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ವಿಶಾಲ್ ಸಿಂಗ್ ಎಂಬ ಬಡರೋಗಿಗಳ ಅನ್ನದಾತ

ಪಂಜುಗಂಗೊಳ್ಳಿ  ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ…

2 hours ago