ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾದ ಬೆನ್ನಲ್ಲೇ ಇದೀಗ ಮತ್ತೊಂದು ಸಂಕಷ್ಟ ಸಿದ್ದರಾಮಯ್ಯ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಅಥವಾ ಮಂಗಳವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾದ ನಂತರ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ಕೋರ್ಟ್ ಆದೇಶದ ಮೇರೆಗೆ ಎಫ್‌ಐಆರ್ ದಾಖಲಿಸಿದ್ದೇನೆ. ಒಬ್ಬ ಮುಖ್ಯಮಂತ್ರಿ ವಿರುದ್ಧ ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಮುಡಾ ಹಗರಣವೇ ಸಾಕ್ಷಿಯಾಗಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ . ಸಿಬಿಐ ತನಿಖೆ ಆಗುವವರೆಗು ಹೋರಾಟ ಮುಂದುವರೆಯುತ್ತದೆ ಎಂದರು.
ಎಸ್.ಪಿ ಉದೇಶ್ ವಿರುದ್ಧ ಕಾನೂನು ಹೋರಾಟ
ಮೈಸೂರು ಲೋಕಾಯುಕ್ತ ಎಸ್.ಪಿ.ಉದೇಶ್ ವಿರುದ್ಧ ಕಾನೂನು ಹೋರಾಟ ಖಚಿತ. ಉದೇಶ್ ಅವರು ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಮತ್ತು ಆದೇಶದ ನಂತರ ಈಗ ಎಫ್‌ಐಆರ್ ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೇ ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದರಿಂದ ಇದಕ್ಕೆ ಶಿಕ್ಷೆಕೊಡಿಸುವುದು ಖಚಿತವಾಗಿದೆ ಎಂದರು.