ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಜಿ.ಟಿ ದೇವೇಗೌಡರ ಮಾತು ದೊಸ್ತಿ ಪಕ್ಷಗಳಿಗೆ ಮುಜುಗರ ತರಿಸಿದೆ. ಈ ನಡುವೆ, ಜಿಟಿ ದೇವೇಗೌಡ ಅವರ ಬೆಂಬಲದ ಮಾತಿಗಡ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಬಹಳ ವರ್ಷಗಳಿಂದ ನನ್ನ ವೈಯಕ್ತಿಕ ಮತ್ತು ರಾಜಕೀಯ ಜೀವನವನ್ನು ತೀರಾ ಹತ್ತಿರದಿಂದ ಬಲ್ಲವರಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಅವರು ಸಹ ಮುಡಾ ಸದಸ್ಯರಾಗಿದ್ದಾರೆ. ಹೀಗಾಗಿ ಅವರ ಮಾತು ಸತ್ಯವಾಗಿದೆ ಎಂದು ಹೇಳಿದ್ದಾರೆ.
ಜಿಟಿ ದೇವೇಗೌಡರು ಹಾಗೂ ತಾನು ರಾಜಕೀಯವಾಗಿ ನಾವು ಬೇರೆ ಬೇರೆ ಪಕ್ಷದಲ್ಲಿರಬಹುದು. ಆದರೆ ಸತ್ಯ ಮತ್ತು ನ್ಯಾಯಕ್ಕೆ ಪಕ್ಷ ಇಲ್ಲ. ಅದು ವ್ಯಕ್ತಿಯ ಆತ್ಮಸಾಕ್ಷಿಗೆ ಸಂಬಂಧಿಸಿದ್ದಾಗಿದೆ. ಹೀಗಾಗಿ ಇಂದು ಜಿ.ಟಿ.ಡಿ. ತಮ್ಮ ಆತ್ಮಸಾಕ್ಷಿಯ ಕರೆಗೆ ಓಗೊಟ್ಟು, ತಾಯಿ ಚಾಮುಂಡೇಶ್ವರಿಯನ್ನು ಸಾಕ್ಷಿಯಾಗಿಟ್ಟುಕೊಂಡು ದಸರಾ ಹಬ್ಬದ ಸಮಾರಂಭದಲ್ಲಿ ಸತ್ಯ ನುಡಿದ್ದಾರೆ ಎಂದಿದ್ದಾರೆ
ನಾನೆಂದೂ ದ್ವೇಷದ ರಾಜಕೀಯ ಮಾಡಿದವನಲ್ಲ, ವಿರೋಧಿ ರಾಜಕಾರಣಿಗಳ ವೈಯಕ್ತಿಕ ಬದುಕು ಇಲ್ಲವೆ, ಅವರ ಕುಟುಂಬವನ್ನು ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡಿಲ್ಲ. ಜಿ.ಟಿ.ದೇವೇಗೌಡರು ಹೇಳಿರುವ ಸತ್ಯ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿರುವ ಹಲವು ನಾಯಕರಿಗೆ ಗೊತ್ತಿದೆ. ಆದರೆ ತಮ್ಮ ಪಕ್ಷದ ಅನೇಕ ಹಿರಿಯ ನಾಯಕರ ಒತ್ತಡಕ್ಕೆ ಬಲಿಯಾಗಿ ಮೌನವಾಗಿದ್ದಾರೆ. ಅವರು ಕೂಡಾ ಮುಕ್ತವಾಗಿ ಮಾತನಾಡಬೇಕಾಗಿದೆ ಎಂದಿದ್ದಾರೆ.
ರಾಜಕೀಯವನ್ನು ರಾಜಕೀಯವಾಗಿ ಎದುರಿಸಬೇಕೇ ವಿನ: ಸುಳ್ಳು ಆರೋಪಗಳ ಮೂಲಕ ಹೆಣೆಯುವ ರಾಜಕೀಯ ಷಡ್ಯಂತ್ರದಿಂದ ಅಲ್ಲ. ಈ ಕೆಟ್ಟ ಪರಂಪರೆಯನ್ನು ತಡೆಗಟ್ಟಬೇಕಾದರೆ ನಮ್ಮ ರಾಜಕೀಯ ನಾಯಕರೆಲ್ಲರೂ ಪಕ್ಷಾತೀತವಾಗಿ ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲುವ ಧೈರ್ಯ ಮಾಡಬೇಕಾಗುತ್ತದೆ. ಈ ಮೂಲಕ ಕರ್ನಾಟಕದಿಂದ ಹೊಸ ರಾಜಕೀಯ ಪರಂಪರೆಗೆ ನಾಂದಿ ಹಾಡಬೇಕಾಗುತ್ತದೆ. “ಸತ್ಯಮೇವ ಜಯತೆ” ಎಂದು ಬರೆದುಕೊಂಡಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…