siddaramaiah reaction about mysore sadhana samavesha
ಮೈಸೂರು : ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ: ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲವಾದ್ದರಿಂದ, ಇದರಲ್ಲಿ ಅವಮಾನ ಮಾಡುವ ಪ್ರಶ್ನೆಯಿಲ್ಲ. ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಇದು ಸದಾ ಭ್ರಮೆಯಾಗಿಯೇ ಇರಲಿದೆ ಎಂದರು.
ಡಿಜಿಟಲ್ ಪೇಮಂಟ್-ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ: ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ನಿಂದ ತೆರಿಗೆ ನೋಟೀಸ್ ನೀಡುತ್ತಿದೆ ಎಂಬ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಿಎಸ್‌ಟಿ ಎಂಬುದನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್‌ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯಸರ್ಕಾರಗಳು ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು
ಕಾಂಗ್ರಸ್ ಗ್ಯಾರಂಟಿಗಳನ್ನು ಬಿಜೆಪಿ ಅನುಕರಿಸುತ್ತಿದೆ: ನಿನ್ನೆ ನಡೆದ ಸಾಧನಾ ಸಮಾವೇಶ ಬಿಜೆಪಿಯವರಿಗೆ ಉತ್ತರ ನೀಡಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿಗಳಿಗಾಗಿ 52 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…