ಮೈಸೂರು

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ: ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲವಾದ್ದರಿಂದ, ಇದರಲ್ಲಿ ಅವಮಾನ ಮಾಡುವ ಪ್ರಶ್ನೆಯಿಲ್ಲ. ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಇದು ಸದಾ ಭ್ರಮೆಯಾಗಿಯೇ ಇರಲಿದೆ ಎಂದರು.

ಡಿಜಿಟಲ್ ಪೇಮಂಟ್-ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ: ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ನಿಂದ ತೆರಿಗೆ ನೋಟೀಸ್ ನೀಡುತ್ತಿದೆ ಎಂಬ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಿಎಸ್‌ಟಿ ಎಂಬುದನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್‌ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯಸರ್ಕಾರಗಳು ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು

ಕಾಂಗ್ರಸ್ ಗ್ಯಾರಂಟಿಗಳನ್ನು ಬಿಜೆಪಿ ಅನುಕರಿಸುತ್ತಿದೆ: ನಿನ್ನೆ ನಡೆದ ಸಾಧನಾ ಸಮಾವೇಶ ಬಿಜೆಪಿಯವರಿಗೆ ಉತ್ತರ ನೀಡಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿಗಳಿಗಾಗಿ 52 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

8 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago