Mysore
15
scattered clouds

Social Media

ಶನಿವಾರ, 31 ಜನವರಿ 2026
Light
Dark

ಭಾರತ-ಪಾಕ್‌ ಯುದ್ಧ ವಿರಾಮ ವಿಚಾರ: ಕೇಂದ್ರದ ತೀರ್ಮಾನಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

ಎಚ್.ಡಿ.ಕೋಟೆ: ಭಾರತ-ಪಾಕಿಸ್ತಾನ ನಡುವೆ ಯುದ್ಧ ವಿರಾಮ ಘೋಷಣೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕೇಂದ್ರದ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದು ಹೇಳಿದ್ದಾರೆ.

ಈ ಕುರಿತು ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ- ಪಾಕ್ ಯುದ್ಧ ವಿರಾಮ ಕುರಿತು ಎರಡು ದೇಶಗಳ ಡಿಜಿಎಂಗಳು ಇಂದು ಸಭೆ ಮಾಡುತ್ತಿದ್ದಾರೆ. ಸಭೆಯಲ್ಲಿ ಏನು ತೀರ್ಮಾನ ಮಾಡ್ತಾರೆ ಮಾಡಲಿ. ಆದರೆ ನಾವೆಲ್ಲಾ ಕೇಂದ್ರದ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದರು.

ಇನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆ ಬಗ್ಗೆ ನಾನು ಮಾತನಾಡುವುದಿಲ್ಲ ಸದ್ಯಕ್ಕೆ ಕದನ ವಿರಾಮ ಘೋಷಣೆ ಆಗಿದೆ. ಅದನ್ನು ಸ್ವಾಗತ ಮಾಡಿದ್ದೇನೆ. ಯುದ್ದದ ಬಗ್ಗೆ ನಾನೇನು ಮಾತನಾಡಲ್ಲ ಎಂದರು.

ಇನ್ನು ಇಂದಿರಾಗಾಂಧಿ ರೀತಿ ಯುದ್ಧ ಮಾಡ್ಬೇಕು ಎಂಬ ವಿಚಾರ ಕೇಳಿ ಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಇಂದಿರಾ ಗಾಂಧಿ ಸಮಯದ ಯುದ್ಧ ಆಗಿ ತುಂಬಾ ವರ್ಷಗಳೇ ಆಗಿವೆ. ಸದ್ಯಕ್ಕೆ ಈಗ ನಾನು ಆ ಬಗ್ಗೆ ಏನು ಹೇಳಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆ ಮಾಡಿ ಕದನ ವಿರಾಮ ಘೋಷಣೆ ಮಾಡಬೇಕಿತ್ತು ಎಂದು ಹೇಳಿದರು.

Tags:
error: Content is protected !!