ಮೈಸೂರು

ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು: ಸಿ.ಎಂ.ಸಿದ್ದರಾಮಯ್ಯ

ಮೈಸೂರು: ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಶ್ವಮೈತ್ರಿ ಬುದ್ಧ ವಿಹಾರ ವೈಶಾಖ ಬುದ್ಧಪೂರ್ಣಿಮ ಹಾಗೂ ಭಗವಾನ್ ಬುದ್ಧರ 2568ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಸಮಾನತೆ ಪೋಷಿಸುವ ಜಾತಿ ವ್ಯವಸ್ಥೆ ಅಳಿಸಲು ಬುದ್ಧ, ಬಸವ, ಅಂಬೇಡ್ಕರ್ ರೀತಿ ಹಲವು ಮಹನೀಯರು ಶ್ರಮಿಸಿದರು. ಅತ್ಯಂತ ಕಡು ಬಡವ ಮೇಲ್ಜಾತಿಯವರನ್ನು ನಾವು ಬುದ್ದಿ, ಸ್ವಾಮಿ ಅಂತ ಗೌರವಿಸುತ್ತೇವೆ. ಅದೇ ಅನೂಲಸ್ಥ ಕೆಳ ಜಾತಿಯವರನ್ನು ಏಕವಚನದಲ್ಲಿ ಅಗೌರವದಿಂದ ಕರೆಯುತ್ತೇವೆ. ಇದೇ ಗುಲಾಮಗಿರಿ ಮನಸ್ಥಿತಿ. ಈ ಮನಸ್ಥಿತಿಯನ್ನು ಅಳಿಸಲು ಬುದ್ಧ, ಬಸವ ಅಂಬೇಡ್ಕರ್ ಸೇರಿ ಹಲವರು ಶ್ರಮಿಸಿದರು.

ಪಟ್ಟಭದ್ರ ಹಿತಾಸಕ್ತಿಗಳು ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಕಾಲದಲ್ಲೂ ಇದ್ದರು. ಈಗಲೂ ಇದ್ದಾರೆ. ಇವರು ಸಮಾಜದ ಪ್ರಗತಿಯ ಶತ್ರುಗಳು. ಆದರೆ ನಮ್ಮ ಸಂವಿಧಾನ ಎಲ್ಲಾ ಜಾತಿ ಸಮುದಾಯಗಳಿಗೂ ಸಮಾನ ಅವಕಾಶ ಕಲ್ಪಿಸುತ್ತದೆ. ಆದ್ದರಿಂದ ಸಂವಿಧಾನ ಜ್ಞಾನ ಸರ್ವರಿಗೂ ಅಗತ್ಯ ಎಂದರು.

ತಾವೊಬ್ಬರೇ ಶ್ರೇಷ್ಠರು ಎಂದು ಕರೆಸಿಕೊಳ್ಳುವವರು ಬಹಳ ಪುಕ್ಕಲರಾಗಿರುತ್ತಾರೆ. ಶ್ರೇಷ್ಠತೆಯ ವ್ಯಸನ ಹೊಂದಿದ್ದ ಹಿಟ್ಲರ್ ಲಕ್ಷಾಂತರ ಮನುಷ್ಯರ ಕೊಲೆಗೆ ಕಾರಣರಾದರು. ಪುಕ್ಕಲರು ಮಾತ್ರ ತಾವೊಬ್ಬರೇ ಶ್ರೇಷ್ಠರು ಎಂದು ಬಿಂಬಿಸಿಕೊಳ್ಳಲು ಒದ್ದಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ನಾವುಗಳು ಬುದ್ಧ-ಬಸವ-ಕುವೆಂಪು ಆಗಲು ಸಾಧ್ಯವಿಲ್ಲ. ಆದರೆ ಇವರ ಹಾದಿಯಲ್ಲಾದರೂ ನಾವು ನಡೆಯಬೇಕು. ಬಸವಣ್ಣರನ್ನು ಪೂಜಿಸುತ್ತಾ ಯಾವ ಜಾತಿ ಎಂದು ಜಾತಿವಾದ ಮಾಡುವುದು ತಪ್ಪು. ವಿದ್ಯಾವಂತರೇ ಹೆಚ್ವು ಜಾತಿವಾದಿಗಳಾಗುತ್ತಿರುವುದು ದುರಂತದ ಸಂಗತಿ. ಆದ್ದರಿಂದ ವೈಚಾರಿಕತೆ ಮತ್ತು ಮಾನವೀಯತೆ ಇರುವ ಶಿಕ್ಷಣ ವ್ಯವಸ್ಥೆ ರೂಪಿಸಬೇಕಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಾತಿ ವ್ಯವಸ್ಥೆ ನೀರಿನ ಬಾವಿಗೆ ಬಿದ್ದ ಕಸದಂತೆ. ಕೊಡದಲ್ಲಿ ನೀರು ಸೇದುವಾಗ ಕಸ ಪಕ್ಕಕ್ಕೆ ಸರಿಯುತ್ತದೆ. ನೀರು ಸೇದಿದ ಮೇಲೆ ಮತ್ತೆ ಕಸ ತುಂಬಿಕೊಳ್ಳುತ್ತದೆ. ಆದ್ದರಿಂದ ಕಸವನ್ನೇ ನೀರಿನಿಂದ ತೆಗೆದು ಹೊರಗೆ ಹಾಕಿದರೆ ಜಾತಿ ವ್ಯವಸ್ಥೆ ಮತ್ತು ಅಸಮಾನತೆ ಹೋಗುತ್ತದೆ ಎಂದರು.

ಈ ಅಸಮಾನತೆ ಅಳಿಸುವ ಉದ್ದೇಶದಿಂದಲೇ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆರ್ಥಿಕವಾಗಿ ಶಕ್ತಿ ಬಂದರೆ ಸ್ವಾಭಿಮಾನಿಗಳಾಗುತ್ತಾರೆ. ಮಹಿಳೆಯರಲ್ಲಿ, ಬಡವರಲ್ಲಿ ಆರ್ಥಿಕ ಶಕ್ತಿ ತುಂಬುವ ಮೂಲಕ ಅವರನ್ನು ಸ್ವಾಭಿಮಾನಿಗಳನ್ನಾಗಿ ಮಾಡುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.

ಆಯುಷ್ಮಾನ್ ಡಾ.ಕಲ್ಯಾಣಸಿರಿ ಭಂತೇಜಿ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾತ್, ಮಾಜಿ ಶಾಸಕ ಸೋಮಶೇಖರ್, ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

1 min ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago