ಎಚ್.ಡಿ.ಕೋಟೆ: ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಬಗ್ಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ 2 ವರ್ಷದ ಸಾಧನೆ ಕಾರ್ಯಕ್ರಮ ಮಾಡಬೇಕು. ಈ ಬಗ್ಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತುಕತೆ ಆಗಿದೆ. ಕಾರ್ಯಕ್ರಮದ ಬಗ್ಗೆ ಚರ್ಚೆ ಆದಾಗ ಭಾರತ ಹಾಗೂ ಪಾಕ್ ನಡುವೆ ಯುದ್ಧ ಶುರುವಾಗಿರಲಿಲ್ಲ. ಸದ್ಯಕ್ಕೆ ಕದನ ವಿರಾಮವಿದೆ. ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.
ಇದನ್ನೂ ಓದಿ:- ಭಾರತ-ಪಾಕ್ ಯುದ್ಧ ವಿರಾಮ ವಿಚಾರ: ಕೇಂದ್ರದ ತೀರ್ಮಾನಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ
ಇನ್ನು ರಾಜ್ಯ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ಏನು ಚರ್ಚೆ ಆಗಿಲ್ಲ. ಸಂಪುಟ ಪುನಾರಚನೆ ಮಾಡುವಾಗ ಮಾಧ್ಯಮದವರಿಗೆ ಹೇಳಿಯೇ ಮಾಡುತ್ತೇನೆ ಎಂದರು.
ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…
ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…
ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…
ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್‌ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್‌ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೇ ಜಿಲ್ಲಾಧಿಕಾರಿಗಳು…