Categories: ಮೈಸೂರು

ರಾಜ್ಯ ಸರ್ಕಾರದ 2 ವರ್ಷದ ಸಾಧನೆ ಬಗ್ಗೆ ಕಾರ್ಯಕ್ರಮ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಎಚ್.ಡಿ.ಕೋಟೆ: ರಾಜ್ಯ ಸರ್ಕಾರದ ಎರಡು ವರ್ಷದ ಸಾಧನೆ ಬಗ್ಗೆ ಕಾರ್ಯಕ್ರಮ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನ ಎಚ್.ಡಿ.ಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ 2 ವರ್ಷದ ಸಾಧನೆ ಕಾರ್ಯಕ್ರಮ ಮಾಡಬೇಕು. ಈ ಬಗ್ಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಜೊತೆ ಮಾತುಕತೆ ಆಗಿದೆ. ಕಾರ್ಯಕ್ರಮದ ಬಗ್ಗೆ ಚರ್ಚೆ ಆದಾಗ ಭಾರತ ಹಾಗೂ ಪಾಕ್‌ ನಡುವೆ ಯುದ್ಧ ಶುರುವಾಗಿರಲಿಲ್ಲ. ಸದ್ಯಕ್ಕೆ ಕದನ ವಿರಾಮವಿದೆ. ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.

ಇದನ್ನೂ ಓದಿ:- ಭಾರತ-ಪಾಕ್‌ ಯುದ್ಧ ವಿರಾಮ ವಿಚಾರ: ಕೇಂದ್ರದ ತೀರ್ಮಾನಕ್ಕೆ ಬದ್ಧ ಎಂದ ಸಿಎಂ ಸಿದ್ದರಾಮಯ್ಯ

ಇನ್ನು ರಾಜ್ಯ ಸಂಪುಟ ಪುನಾರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ಏನು ಚರ್ಚೆ ಆಗಿಲ್ಲ. ಸಂಪುಟ ಪುನಾರಚನೆ ಮಾಡುವಾಗ ಮಾಧ್ಯಮದವರಿಗೆ ಹೇಳಿಯೇ ಮಾಡುತ್ತೇನೆ ಎಂದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago