ಮೈಸೂರು

ಮುಡಾ ಗಬ್ಬೆದ್ದು ಹೋಗಿದೆ; ಸರಿಪಡಿಸುವ ಕಲಸ ಮಾಡಲಾಗುವುದು ಎಂದ ಸಿಎಂ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಗಬ್ಬೆದ್ದು ಹೋಗಿದ್ದು, ಹಗರಣ ಬಗ್ಗೆ ತನಿಖೆ ನಡೆಯುತ್ತಿದ್ದು, ತನಿಖಾ ವರದಿ ಬಂದ ಬಳಿಕ ಮುಡಾ ಕ್ಲೀನ್‌ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಜು.11) ಹೇಳಿದರು.

ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುಡಾ ಕ್ಲೀನ್‌ ಮಾಡುವುದು ಒಂದು ಭಾಗ, ಅದು ನಮ್ಮ ಕಾಲದಲ್ಲಿ ಅಲ್ಲ ಮೊದಲಿನಿಂದಲೇ ಗಬ್ಬೆದ್ದು ಹೋಗಿದೆ. ಅದನ್ನು ಕ್ಲೀನ್‌ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದಿನ ಬಿಜೆಪಿ ಅಧಿಕಾರಾವಧಿಯಲ್ಲಿ ಇದು ಗಬ್ಬೆದ್ದು ಹೋಗಿದ್ದು, ಅವರ ಕಾಲದಲ್ಲಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ. ಅವರೇ ನಮಗೆ ಜಮೀನು ನೀಡಿದ್ದು ಎಂದು ಸಿಎಂ ಹೇಳಿದರು.

ಸಿಎಂ ಹೆಸರಿನ ಜತೆಯಲ್ಲಿ ಉಳಿದವರು ಬಚಾವ್‌ ಆಗುವ ಕೆಲಸ ಮಾಡುತ್ತಿದ್ದಾರಾ ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಸಿಎಂ, ಇಲ್ಲ ಈ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಮೇಯವಿಲ್ಲ. ಈ ಬಗ್ಗೆ ತನಿಖೆ ನಡೆಲಾಗವುದು. ನಮ್ಮ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ನಮ್ಮದು ಸ್ಕ್ಯಾಂಡಲ್‌ ಅಲ್ಲ. ಜಾಗ ಕಳೆದುಕೊಂಡವರಿಗೆ 50:50 ಅನುಪಾತದಲ್ಲಿ ನಿವೇಶನ ನೀಡುವಂತೆ ಮುಡಾ ಹೇಳಿದ್ದು, ಅದರಂತೆ ನಮಗೆ ಜಾಗ ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.

ಹೊಟ್ಟೆ ಕಿಚ್ಚಿನಿಂದ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ: ಇನ್ನು ಇದೇ ವೇಳೆ ಬಿಜೆಪಿ ಹೇಳಿಕೆಗಳ ಬಗ್ಗೆ ಮಾತನಾಡಿದ ಸಿಎಂ, ಹಿಂದುಳಿದ ವರ್ಗದ ಸಾಮನ್ಯ ವ್ಯಕ್ತಿ ಎರಡು ಬಾರಿ ಸಿಎಂ ಆಗಿದ್ದನ್ನು ಬಜೆಪಿ ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿ ನನ್ನ ವಿರುದ್ಧ ಷಡ್ಯಂತರ ರೂಪಿಸಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕೆಗಳಿಗೆ ತಿರುಗೇಟು ಕೊಟ್ಟರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

2 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

2 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

2 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

2 hours ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

11 hours ago