ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವ ನ ಹೇಳಿದರು.
ಮೃತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ ಅವರು, ನ್ಯಾಯಯುತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಬಳಿಕ ಮೃತರ ಕುಟುಂಬಸ್ಥರಿಗೆ ಭದ್ರತೆ ನೀಡುವಂತೆ ಸೂಚನೆ ನೀಡಿದರು. ಮಾಜಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಪುಟ್ಟರಂಗಶೆಟ್ಟಿ ಸೇರಿದಂತೆ ಹಲವರು ಸಾಥ್ ನೀಡಿದರು.




