ಮೈಸೂರು : ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೆ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರವಿ ಹೇಳಿದರು.
ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹಣದ ದುರುಪಯೋಗ ಅವ್ಯಾಹತ್ವಾಗಿ ನಡೆದಿದೆ. ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಇಂಧನ ಬೆಲೆ ಏರಿಕೆಯು ಬೇರೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವುದಕ್ಕೆ ಪರವಾನಿಗೆ ಕೊಟ್ಟಂತೆ ಎನ್ನುತ್ತಿದ್ದವರು ೨ನೇ ಬಾರಿ ಸಿಎಂ ಆದ ಬಳಿಕ ಇಂಧನ ಮೇಲಿನ ಸೆಸ್ ಅನ್ನು ೨ ಬಾರಿ ಹೆಚ್ಚಿಸಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೆ ಮುಖ್ಯಮಂತ್ರಿಯಾದ ಬಳಿಕ ನೋಂದಣಿ ಶುಲ್ಕ ಹೆಚ್ಚಾಗಿದೆ. ವಾಹನ ನೋಂದಣಿ ಶುಲ್ಕ ಜಾಸ್ತಿಯಾಗಿದೆ. ಹಾಲಿನ ದರ ಏರಿಕೆ ಆಗಿದೆ. ನೀರಿನ ದರ ಏರಿಸುವ ಸಾಧ್ಯತೆಯೂ ಇದೆಯಂತೆ ಎಂದು ಎಂದರು.
ಹಾಲು ಉತ್ಪಾದಕರಿಗೆ ನೀಡುವ ಸಬ್ಸಿಡಿಯನ್ನು ಸರ್ಕಾರ ಕಳೆದ ೮ ತಿಂಗಳಿಂದ ಬಾಕಿ ಉಳಿಸಿಕೊಂಡಿದೆ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಬೇರೆ ಕೆಲಸಗಳಿಗೆ ದುರುಪಯೋಗವಾಗುತ್ತಿದೆ. ವಾಲ್ಮೀಕಿ ನಿಗಮದ ದುರ್ಬಳಕೆಯಾದ ೧೮೭ ಕೋಟಿಯಲ್ಲಿ ಕೇವಲ ೧೫ ಕೋಟಿ ರಿಕವರಿ ಆಗಿದೆ. ಅದರಲ್ಲಿ ತೆಲಂಗಣಾ ವಿಧಾನಸಭಾ ಚುನಾವಣೆಗೆ ಎಷ್ಟು ಹಣ ಹೋಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಬೇಕು ಎಂದು ಕೇಳಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…