ಮೈಸೂರು : ಲೋಕಸಭಾ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ 06ರಲ್ಲಿ ಸಾರ್ವಜನಿಕರಿಗೆ ಮತದಾನ ಮಾಡುವಂತೆ ಪ್ರೇರೆಪಿಸಲು ವಲಯ ಕಛೇರಿಯ ಸ್ವಾಗತ ಕಮಾನು, ವಲಯ ಕಛೇರಿಯ ಮುಂಭಾಗದಲ್ಲಿ ಮತದಾನ ಕುರಿತು ಗೋಡೆಬರಹ, ಮತದಾನದ ಸೆಲ್ಫಿ ಕೌಂಟರ್ ಹಾಗೂ ” ನಾನು ಮತದಾನ ಮಾಡುತ್ತೇನೆ ” ಎಂಬ ಕುರಿತು ಹಸ್ತಾಕ್ಷರ ಸಂಗ್ರಹಣಾ ಅಭಿಯಾನವನ್ನು ಚಾಮರಾಜ ವಿಧಾನ ಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ವೆಂಕಟರಾಜ್ ರವರು ಉದ್ಘಾಟಿಸಿ ಸಾರ್ವಜನಿಕರಿಗೆ ಏಪ್ರಿಲ್ 26 ರಂದು ತಪ್ಪದೆ ಮತದಾನ ಮಾಡಲು ಮನವಿ ಮಾಡಿದರು.
ವಲಯ ಆಯುಕ್ತರಾದ ವಾಣಿ ವಿ ಆಳ್ವ, ಅಭಿವೃದ್ಧಿ ಅಧಿಕಾರಿ ವೆಂಕಟೇಶ್, ಪರಿಸರ ಅಭಿಯಂತರರು ಮೈತ್ರಿ, ಸಹಾಯಕ ಕಂದಾಯಾಧಿಕಾರಿಯವರಾದ ಸಿದ್ದರಾಜು ಮತ್ತು ಅಶೋಕ್, ಕಿರಿಯ ಅಭಿಯಂತರರು ಕೃಷ್ಣಮೂರ್ತಿ, ಹಿರಿಯ ಆರೋಗ್ಯ ನಿರೀಕ್ಷಕರು, ಕಂದಾಯ ಪರಿಶೀಲಕರು, ಕಛೇರಿ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…