Mysore
30
scattered clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ರೇಷ್ಮೆ ಉದ್ಯಮ| ಜಿ.ಡಿ.ಪಿ ಬೆಳವಣಿಕೆಯಲ್ಲಿ ಪ್ರಮುಖ ಪಾತ್ರ: ಎಚ್.ಡಿ ಕುಮಾರಸ್ವಾಮಿ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ಇಂದು ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸಚಿವ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ “ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ 27 ರಾಜ್ಯಗಳ ರೈತರು ತಮ್ಮನ್ನು ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಮೈಸೂರು ಭಾಗದಲ್ಲಿ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚಿದೆ ಎಂದರು.

ನೆರೆಯ ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ಹೆಚ್ಚಿನ ರೇಷ್ಮೆ ಬೆಳೆದು, ಬೆಲೆಯಲ್ಲಿ ಪ್ರಥಮ ಸ್ಥಾನ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರೇಷ್ಮೆ ಬೆಳೆಗೆ ಕಳೆದ ಎರಡು ಮೂರು ವರ್ಷಗಳಿಂದ ಉತ್ತಮವಾದ ಬೆಲೆ ಸಿಗುತ್ತಿದ್ದು, ರೇಷ್ಮೆ ಬೆಳೆಗಾರರು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಕೇಂದ್ರ ಸರ್ಕಾರವು 1.52 ಲಕ್ಷ ಕೋಟಿ ಹಣವನ್ನು ಕೃಷಿ ಕ್ಷೇತ್ರಕ್ಕೆ ನೀಡಲಾಗಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬಂದಿಸಿದ ಚರ್ಚೆಗಳು ನಡೆಯುತ್ತವೆ. ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ರೈತರು ಆತ್ಮ ವಿಶ್ವಾಸದಿಂದ ಜೀವನ ನಡೆಸಬೇಕು ಎಂದು ಹೇಳಿದರು.

ಶ್ಯಾಮ್ ಪ್ರಕಾಶ್ ಮುಖರ್ಜಿ ಅವರ ದೂರ ದೃಷ್ಟಿಯಿಂದ ಕೇಂದ್ರೀಯ ರೇಷ್ಮೆ ಮಂಡಳಿ ಪ್ರಾರಂಭವಾಯಿತು. ಈ ಮಂಡಳಿಯ ಪ್ರಾರಂಭದಿಂದ ರೇಷ್ಮೆ ಬೆಲೆಯಲ್ಲಿ ಹಲವು ಆವಿಷ್ಕಾರ ಆಗಿದೆ ಎಂದರು.

Tags: