ಮೈಸೂರು

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣಾ ಆಯೋಗ ವ್ಯವಸ್ಥಿತವಾಗಿ ಸಂಘಟಿತ ಅಪರಾಧ ಮಾಡುತ್ತಿದೆ. ಬಿಜೆಪಿಯವರು ಈ ಅಪರಾಧದಲ್ಲಿ ಪಾಲುದಾರರು. ಮುಸ್ಲಿಂರು ನಮಗೆ ಮತ ಹಾಕಲ್ಲ ಎಂದು ಮುಸ್ಲಿಂರ ಮತಗಳನ್ನ ಡಿಲೀಟ್ ಮಾಡಿಸುತ್ತಿದ್ದಾರೆ. ಬಿಜೆಪಿವರ ಜೊತೆ ಚುನಾವಣಾ ಆಯೋಗ ಶಾಮಿಲಾಗಿದೆ. ನಮಗೆ ಮೊದಲಿನಿಂದಲೂ ಎಸ್ಐಆರ್ ಬಗ್ಗೆ ಅನುಮಾನ ಇದೆ. ತಕ್ಷಣವೇ ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಲ್ಲಬೇಕು. ಮುಸ್ಲಿಂಮರ ಮತಗಳನ್ನ ಡಿಲೀಟ್ ಮಾಡಿಸುವುದು ಬಹಳ ಸುಲಭ. ಹೆಸರಲ್ಲೇ ಅದು ಅವರ ಧರ್ಮ ಗೊತ್ತಾಗುತ್ತದೆ. ಜೊತೆಗೆ ಅವರು ಗುಂಪು ಗುಂಪಾಗಿಯೇ ಇರುತ್ತಾರೆ. ಹೀಗಾಗಿ ಸುಲಭವಾಗಿ ಅವರ ಹೆಸರುಗಳನ್ನ ಡಿಲೀಟ್ ಮಾಡಿಸಲಾಗುತ್ತಿದೆ. ಫಾರಂ ನಂಬರ್ 7ನಲ್ಲಿ ಆಕ್ಷೇಪಣೆ ಬೇರೆ ವಿಚಾರ‌. ಆದರೆ ಒಬ್ಬೊಬ್ಬರೇ ಬಲ್ಕಾಗಿ ಅರ್ಜಿ ತುಂಬಿದರೆ ಅದರ ಅರ್ಥ ಏನು. ಅವರಿಗೆ ಎಲ್ಲಾ ಎಫಿಕ್ ಕಾರ್ಡ್ ಗಳನ್ನ ಕೊಟ್ಟವರು ಯಾರು ಎಂದು ಪ್ರಶ್ನ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

14 mins ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

7 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

7 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

7 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

7 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

7 hours ago