ಮೈಸೂರು: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅನವಶ್ಯಕವಾಗಿ ಬೇರೆಯವರನ್ನು ಬಂಧಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದೂರಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎರಡು ಭಾಗಗಳಿದೆ. ಒಂದು ವಿಡಿಯೋ ಮಾಡಿಕೊಂಡವನು ಇನ್ನೊಂದು ವಿಡಿಯೋ ಹರಿಯಬಿಟ್ಟವನು. ಇದೊಂದು ಘೋರ ಅಪರಾಧ. ಎಸ್‌ಐಟಿ ಈವರೆಗೆ ವಿಡಿಯೋ ವೈರಲ್ ಮಾಡಿದವರನ್ನು ಬಂಧಿಸುವಲ್ಲಿ ವಿಫಲವಾಗಿದೆ. ಆರೋಪಿ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡುತ್ತಾರೆ. ಆದರೆ ಅವರು ಎಸ್‌ಐಟಿ ಕೈಗೆ ಸಿಗುವುದಿಲ್ಲ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.
ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಮಾತನಾಡಿ, ಪ್ರಜ್ವಲ್ ಪಕ್ಷದಲ್ಲಿದ್ದಾಗಲೇ ನಮ್ಮ ಕೈಗೆ ಹಾಗೂ ಕಾರ್ಯರ್ತರ ಕೈಗೆ ಸಿಗುತ್ತಿರಲಿಲ್ಲ. ಇನ್ನು ವಿದೇಶದಲ್ಲಿರುವುದಾಗ ಹೇಗೆ ಸಿಗುತ್ತಾನೆ ಎಂದು ಕಿಡಿಕಾರಿದರು.
ಇನ್ನು ದೇವರಾಜೇಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಮಾತನಾಡಿದ ಎಚ್‌ಡಿಕೆ ಎಸ್‌ಐಟಿ ದೇವರಾಜೇಗೌಡರನ್ನು ಯಾಕೆ ಬಂಧಿಸಿದ್ದಾರೆ. ಅವರಿಂದ ಯಾವ ಮಾಹಿತಿ ಬೇಕಿದೆ ಎಂದು ಬಂಧಿಸಿದ್ದಾರೆ. ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣವಾ? ಅತ್ಯಾಚಾರ ಮಾಹಿತಿ ಸಂಬಂಧವಾ? ಅಥವಾ ಆಡಿಯೋ ವೈರಲ್ ಮಾಹಿತಿ ಸಂಬಂಧ ವಿಚಾರಣೆಗಾಗಿ ಬಂಧಿಸಿದ್ದಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…