ಮೈಸೂರು: ಇಲ್ಲಿನ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ನೇಹಮಯಿ ಕೃಷ್ಣಗೆ ಶಿಕ್ಷಗೆ ವಿಧಿಸಿದೆ.
ಈ ಸಂಬಂಧ ಗುರುವಾರ ನ್ಯಾಯಾಲಯ ಆದೇಶ ಪ್ರಕಟಿಸಿದೆ.
2015 ರಲ್ಲಿ ಸ್ನೇಹಮಯಿ ಕೃಷ್ಣ ಲಲಿತಾದ್ರಿಪುರದ ಕುಮಾರ್ ಎಂಬುವವರಿಂದ ಸಾಲ ಪಡೆದಿದ್ದರು. ಅದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕ್‌ನ ಚೆಕ್ ನೀಡಿದ್ದರು. ಕುಮಾರ್ ಅದನ್ನು ತಮ್ಮ ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ಬಳಿಕ ಕೃಷ್ಣ ವಿರುದ್ಧ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ಪ್ರಕಟಿಸಿದೆ. ಆದರೆ ಶಿಕ್ಷೆಯ ಪ್ರಮಾಣ ಪ್ರಕಟಿಸಿಲ್ಲ.