ಮೈಸೂರು

ಮುಡಾ ಕೇಸ್‌| ಸಿದ್ದರಾಮಯ್ಯ ವಿರುದ್ಧ ನನಗೆ ಅಧಿಕ ದಾಖಲೆ ನೀಡಿದ್ದೇ ಕಾಂಗ್ರೆಸ್‌ ನಾಯಕರು: ಸ್ನೇಹಮಯಿ ಕೃಷ್ಣ ಶಾಕಿಂಗ್‌ ಹೇಳಿಕೆ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ನನಗೆ ಅಧಿಕ ದಾಖಲೆ ನೀಡಿದ್ದೇ ಕಾಂಗ್ರೆಸ್‌ ನಾಯಕರು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು(ಮಾರ್ಚ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ ವಿಚಾರಕ್ಕೆ ಸಂಬಂಧ ಕಳೆದ ಜನವರಿ ತಿಂಗಳಿನಿಂದ ಇಲ್ಲಿಯವರೆಗೂ ಅತಿ ಹೆಚ್ಚಿನ ದಾಖಲೆಗಳು ಕಾಂಗ್ರೆಸ್‌ ನಾಯಕರಿಂದ ಬಂದಿವೆ. ಅವರು ನೀಡಿರುವ ದಾಖಲೆಗಳಿಂದಲೇ ನನ್ನ ಹೋರಾಟದ ವೇಗ ಹೆಚ್ಚಾಗಿದೆ ಎಂದರು.

ಇನ್ನು ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭ್ರಷ್ಟಾಚಾರದ ಬಗ್ಗೆ ಅಸಮಾಧಾನಗೊಂಡಿರುವ ನಾಯಕರು ಇದ್ದಾರೆ. ಆದರೆ ಪಕ್ಷದ ಒಳಗೆ ತೋರಿಸಲು ಅವರಿಗೆ ಆಗಲ್ಲ. ಹೀಗಾಗಿ ನನಗೆ ದಾಖಲೆ ನೀಡಿದ್ದಾರೆ. ಆದರೆ ನಾನು ಕಾಂಗ್ರೆಸ್‌ನ ಯಾವ ಹಂತದ ನಾಯಕರು ಹಾಗೂ ಅವರು ಯಾರು ಎಂಬುದನ್ನು ಹೇಳುವುದಿಲ್ಲ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

3 hours ago