Mysore
30
few clouds

Social Media

ಮಂಗಳವಾರ, 03 ಮಾರ್ಚ್ 2026
Light
Dark

ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸ್ ವಶಕ್ಕೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಸಿಟಿ ಸಿವಿಲ್ ಕೋರ್ಟ್ ಬಳಿ ಅವರನ್ನು ಬಂಧಿಸಿ ಶಾಂತಿನಗರ ಸಿಸಿಬಿ ಕಚೇರಿಗೆ ಕರೆದೊಯ್ಯಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಸ್ನೇಹಮಯಿ ಕೃಷ್ಣ ಅವರು ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರಿಗೆ ಮುಂಬಡ್ತಿ (ಪ್ರಮೋಷನ್) ನೀಡಲು ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕಡೆಯವರು ಲಂಚ ಪಡೆದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ನಟೇಶ್ ಅವರು ನೀಡಿದ ದೂರಿನ ಅಡಿಯಲ್ಲಿ ಸೈಬರ್ ಅಥವಾ ಸಿಸಿಬಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೊತೆಗೆ ಮೈಸೂರಿನ ಮನೆಯಲ್ಲಿ ಶೋಧ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮುಂಬಡ್ತಿ ಪಡೆಯಲು ಸಿಎಸ್ ಶಾಲಿನಿ ರಜನೀಶ್ ಅವರಿಗೆ ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ 1.60 ಕೋಟಿ ರೂ. ಹಣ ನೀಡಿದ್ದರು ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದರು.

Tags:
error: Content is protected !!