ಮೈಸೂರು: ಒಳ ಮೀಸಲಾತಿ ಜಾರಿ ಕುರಿತ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾದರೂ, ಜಾರಿ ವೇಳೆ ರಾಜ್ಯ ಸರ್ಕಾರ ಸಂಬಂಧಿತ ಜಾತಿಗಳ ಔದ್ಯೋಗಿಕ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತ ಇತ್ತೀಚಿನ ಸ್ಥಿತಿಗತಿ ಸಮೀಕ್ಷೆ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯ ಲೋಕಸೇವಾ ಆಯೋಗದ ಮಾಜಿ ಸದಸ್ಯರಾದ ದಾಸಯ್ಯ ಸಲಹೆ ನೀಡಿದರು.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಮಾನದಂಡದಂತೆ ಪರಿಶಿಷ್ಟ ಜಾತಿಯಲ್ಲಿ ಬರುವ ಉಪ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಸಿಗದ ಬಗ್ಗೆ ಖಚಿತವಾದ ಅಂಕಿ ಅಂಶಗಳನ್ನೊಳಗೊಂಡ ವರದಿ ಆಧಾರದ ಮೇಲೆ ರಾಜ್ಯ ಸರ್ಕಾರ ನ್ಯಾಯಯುತ ವರ್ಗೀಕರಣ ಮಾಡಬೇಕು, ವರ್ಗೀಕರಣವು ನ್ಯಾಯಯುತವಾದ, ಅಗತ್ಯವಾದ, ಪೂರ್ಣ ಅಂಕಿ ಅಂಶಗಳನ್ನು ಒಳಗೊಂಡಿರಬೇಕೆಂದು ತಿಳಿಸಿದೆ. ಹೀಗಾಗಿ ಇದನ್ನು ಪಾಲನೆ ಮಾಡಬೇಕು. ಈಚೆಗೆ ಜನಗಣತಿ ನಡೆದಿಲ್ಲ. ಈಗ ರಾಜ್ಯ ಸರ್ಕಾರ ಪಡೆದಿರುವ ಜಾತಿಗಣತಿ ವರದಿ ಸಹಾ ಪೂರ್ಣ ಮಾಹಿತಿ ಒಳಗೊಂಡಿಲ್ಲ. ಹೀಗಾಗಿ ಗ್ರಾಮ ಲೆಕ್ಕಿಗರು, ಮೊದಲಾದವರನ್ನು ಬಳಸಿಕೊಂಡು, ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೂಡಲೇ ರಾಜ್ಯದಾದ್ಯಂತ ಈ ರೀತಿಯ ಅಂಕಿ ಅಂಶ ಸಂಗ್ರಹಿಸಬೇಕು ಎಂದು ಸಲಹೆ ನೀಡಿದರು.
ಜೊತೆಗೆ, ಕೇಂದ್ರ ಸರ್ಕಾರ ಸದ್ಯದಲ್ಲಿಯೇ 2021 ರ ಜನಗಣತಿ ನಡೆಸುವ ಸಾಧ್ಯತೆ ಇರುವುರಿಂದ ಈ ಜಾತಿಗಳ ಜನಸಂಖ್ಯೆ, ಅವರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಮೂಲಕ ಸುಪ್ರೀಂಕೋರ್ಟಿನ ತಿರ್ಪಿನಲ್ಲಿ ನೀಡಿರುವ ಮಾನದಂಡ ಪಾಲಿಸಲು ಸಾಧ್ಯವಾಗಬಹುದಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಮನವಿಯೊಂದನ್ನು ಸಲ್ಲಿಸಬೇಕು ಎಂದರು.
ಸಿಂಧುವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಉಮಾಪತಿ ಹಾಗೂ ದಾಸಯ್ಯ ಅವರ ಇನ್ನಿತರ ವಕೀಲ ಮಿತ್ರರು ಹಾಜರಿದ್ದರು.
ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…
ನಂಜನಗೂಡು: ಗುಜರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಕ್ಷಾಂತರ ಮೌಲ್ಯದ ಪದಾರ್ಥಗಳು ಸುಟ್ಟು ಕರಕಲಾಗಿರುವ ಘಟನೆ ನಂಜನಗೂಡಿನ ಶಂಕರಪುರ ಬಡಾವಣೆಯಲ್ಲಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…