ಮೈಸೂರು

ಬೀಡಾ ಅಂಗಡಿ ಬಿಲ್​ ವಿಚಾರಕ್ಕೆ ಕಿತ್ತಾಡಿಕೊಂಡ ಪ್ರತಿಷ್ಠಿತರ ಮಕ್ಕಳು

ಮೈಸೂರು : ಬೀಡಾ ಅಂಗಡಿಯಲ್ಲಿ ಹಣ ನೀಡುವ ವಿಚಾರವಾಗಿ ಕೆ.ಆರ್​.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ.ಮಹೇಶ್​ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಭಾನುವಾರ ರಾತ್ರಿ ಗಲಾಟೆಯಾಗಿದೆ.

ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಮೈಸೂರಿನ ಕುಂವೆಂಪುನಗರದಲ್ಲಿರುವ ಹೋಟೆಲ್​ ಒಂದರ ಮುಂಭಾಗ ಘಟನೆ ನಡೆದಿದೆ.

ಉಟದ ಬಳಿಕ ಬೀಡ ತಿಂದು ಹಣ ನೀಡಲು ಸಾ.ರಾ.ಜಯಂತ್​ ಮುಂದಾಗಿದ್ದು, ಈ ವೇಳೆ ಪತ್ರಕರ್ತರ ಮಗ ಸ್ಕ್ಯಾನರ್​​ಗೆ ಅಡ್ಡ ನಿಂತಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ನಡುವೆ ಬಡಿದಾಟಕ್ಕೆ ಕಾರಣವಾಗಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿ ಕುವೆಂಪುನಗರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದು ಇಬ್ಬರನ್ನು ಠಾಣೆಗೆ ಕರೆದೊಯ್ದು, ಬುದ್ದಿವಾದ ಹೇಳಿ ಮುಚ್ಚಳಿಕೆ ಪತ್ರವನ್ನು ಬರೆಸಿಕೊಂಡು ಕಳುಹಿಸಿದ್ಧಾರೆ. ವೈರಲ್​ ಆಗಿರುವ ವಿಡಿಯೋದಲ್ಲಿ ಈ ಇಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವುದು ಕಂಡು ಬಂದಿದೆ.

lokesh

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

4 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

5 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

8 hours ago