ಮೈಸೂರು: ಕೇಂದ್ರ ಸಂವಹನ ಇಲಾಖೆ, ವಾರ್ತಾ ಮತ್ತು ಪ್ರಸಾರ ಸಚಿವಾಲಯ ಭಾರತ ಸರ್ಕಾರ ಮೈಸೂರು ಇವರ ವತಿಯಿಂದ ಶ್ರೀ ವಾಣಿವಿಲಾಸ ಅರಸು ಬಾಲಿಕ ಪ್ರೌಢಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ನನಗಾಗಿ ಮತ್ತು ಸಮಾಜಕ್ಕಾಗಿ ಯೋಗ ಎಂಬ ಪರಿಕಲ್ಪನೆಯಲ್ಲಿ ಈ ಬಾರಿ ಯೋಗ ಕಾರ್ಯಕ್ರಮ ನಡೆಸಿ ಹಲವು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲಿಗೆ ಒಂದು ತಾಸು ಸಾಮಾನ್ಯ ಯೋಗಾಸನ ಹಾಗೂ ಪ್ರಾಣಾಯಾಮವನ್ನು ನುರಿತ ಯೋಗತಜ್ಞರ ಮಾರ್ಗದರ್ಶನದೊಂದಿಗೆ ನಡೆಸಲಾಯಿತು.
ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಂವಹನ ಇಲಾಖೆ ಬೆಂಗಳೂರು ನಿರ್ದೇಶಕರಾದ ಪಲ್ಲವಿ ಚಿಣ್ಯ ಅವರು ಸದೃಢ, ಸ್ವಾಸ್ತ್ಯ ಹಾಗೂ ಶಿಸ್ತುಬದ್ಧ ಜೀವನಕ್ಕಾಗಿ ಯೋಗ ಬಹಳ ಉಪಯುಕ್ತವಾಗಿದೆ. ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡಿ ಆರೋಗ್ಯವಂತರಾಗಬೇಕೆಂದು ಕರೆ ನೀಡಿದರು.
ಬಳಿಕ ಯೋಗದಲ್ಲಿ ವಿಶ್ವದಾಖಲೆ ನಿರ್ಮಿಸಿ ಹಲವು ಸ್ಪರ್ಧೆಗಳಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಸೌರಭಗೆ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೇಂದ್ರ ಸಂವಹನ ಇಲಾಖೆ ಕ್ಷೇತ್ರ ಪ್ರಚಾರ ಅಧಿಕಾರಿ ಶ್ರುತಿ, ಕ್ಷೇತ್ರ ಪ್ರಚಾರ ಸಹಾಯಕ ದರ್ಶನ್, ಶಾಲೆಯ ಮುಖ್ಯೋಪಾಧ್ಯಾಯರಾದ ಎನ್.ಸುಬ್ರಹ್ಮಣ್ಯ ಸೇರಿದಂತೆ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…
ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…
ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…
ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್ ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…