ಮೈಸೂರು

ದಕ್ಷಿಣ ಭಾರತ ಕುಂಭಮೇಳ : ನಾಳೆ ಸಿದ್ದತೆ ಕುರಿತು ಸಿಎಂ ಸಭೆ

ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ಗುರುವಾರ)ಯೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿ ದಕ್ಷಿಣ ಭಾರತದ ಕುಂಭಮೇಳ ನಡೆಯುವ ತ್ರಿವೇಣಿ ಸಂಗಮದಲ್ಲಿನ ಪೂರ್ವಸಿದ್ಧತೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಂತಿಮ ರೂಪರೇಷೆಯನ್ನು ಸಿದ್ಧಪಡಿಸಲಿದ್ದಾರೆ ಎಂದು ಸಂಸದ ಸುನಿಲ್ ಬೋಸ್ ಹೇಳಿದರು.

ಪಟ್ಟಣದ ತಾಲ್ಲೂಕು ಕಚೇರಿಯ ಮೂರನೇ ಮಹಡಿಯಲ್ಲಿ ಬುಧವಾರ ಸಂಜೆ ಭೂ ಸುರಕ್ಷಾ ಯೋಜನೆಯ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಿರುಮಕೂಡಲಿನಲ್ಲಿ ಫೆ.೧೦, ೧೧ ಹಾಗೂ ೧೨ರಂದು ೩ ದಿನಗಳ ಕಾಲ ಆಯೋಜನೆಗೊಳ್ಳಲಿರುವ ಕುಂಭಮೇಳಕ್ಕೆ ದಿನಗಣನೆ ಆರಂಭವಾಗಿದ್ದರೂ ಯಾವುದೇ ಪೂರ್ವ ಸಿದ್ಧತೆ ಹಾಗೂ ಅಭಿವೃದ್ಧಿ ಕಾಮಗಾರಿ ಆರಂಭಗೊಳ್ಳದಿರುವ ಬಗ್ಗೆ ಗಮನ ಸೆಳೆದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ನಾಳೆಯೇ ಸಿಎಂ ಸಭೆಗೆ ಸಮಯವನ್ನು ನೀಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭಾಗಿಯಾಗಿ ಸಿದ್ಧತಾ ಕಾರ್ಯಗಳನ್ನು ಅಂತಿಮಗೊಳಿಸಲಿದ್ದಾರೆ ಎಂದರು.

ತಾಲ್ಲೂಕು ಕಚೇರಿಯಲ್ಲಿ ಇನ್ನು ಮುಂದೆ ದಾಖಲೆಗಳ ಸುರಕ್ಷತೆಗಾಗಿ ಭೂ ದಾಖಲೆಗಳನ್ನು ಗಣಕೀಕೃತ ಯಂತ್ರದಲ್ಲಿ ದಾಖಲು ಮಾಡಲಾಗಿದ್ದು, ದಾಖಲೆಗಳ ಹುಡುಕಾಟ ನಡೆಸಲು ಕಾಲಾವಕಾಶ ಪಡೆಯಲಾಗುತ್ತಿತ್ತು. ಕೆಲವು ದಾಖಲೆಗಳು ಹಳೆಯದಾದ್ದರಿಂದ ಹುಡುಕಾಟದ ಸಂದರ್ಭದಲ್ಲಿ ಪುಟಗಳು ಹರಿದು ಹೋಗುತ್ತಿದ್ದವು. ಕಂಪ್ಯೂಟರ್‌ನಲ್ಲಿ ಅಳವಡಿಸಿರುವುದರಿಂದ ಎಲ್ಲಾ ದಾಖಲೆಗಳು ಯಥಾವತ್ತಾಗಿ ಸಾರ್ವಜನಿಕರಿಗೆ ಸಿಗಲಿವೆ ಎಂದು ಸುನಿಲ್ ಬೋಸ್ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಂಸದರು ಶಿಥಿಲಗೊಂಡಿರುವ ತಾಲ್ಲೂಕು ಆಡಳಿತ ಸೌಧದ ನೆಲ ಅಂತಸ್ತಿನ ಆವರಣವನ್ನು ದುರಸ್ತಿಗೊಳಿಸುವಂತೆ ಸ್ಥಳದಲ್ಲಿಯೇ ಇದ್ದ ಲೋಕೋಪಯೋಗಿ ಇಲಾಖೆ ಎಇಇ ಎಸ್.ಸತೀಶ್ ಚಂದ್ರನ್ ಅವರಿಗೆ ಸೂಚಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

1 hour ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

1 hour ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

1 hour ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

1 hour ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

1 hour ago

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

5 hours ago